Wednesday, January 7, 2026
Google search engine

Homeದೇಶಮೋದಿ, ಶಾ ಸಮಾಧಿ ಅಗೆಯುತ್ತೇವೆ : ಜೆಎನ್‌ಯು ವಿದ್ಯಾರ್ಥಿಗಳ ವಿವಾದಾತ್ಮಕ ಘೋಷಣೆ

ಮೋದಿ, ಶಾ ಸಮಾಧಿ ಅಗೆಯುತ್ತೇವೆ : ಜೆಎನ್‌ಯು ವಿದ್ಯಾರ್ಥಿಗಳ ವಿವಾದಾತ್ಮಕ ಘೋಷಣೆ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಶಾ ವಿರುದ್ಧ ವಿದ್ಯಾರ್ಥಿಗಳು ವಿವಾದಾತ್ಮಕ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ದೆಹಲಿ ಗಲಭೆಯ ಪ್ರಮುಖ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶಾರ್ಜಿಲ್ ಇಮಾಮ್‌ಗೆಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ವಿರೋಧಿಸಿ ರಾತ್ರಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಜೆಎನ್‌ಯು ನೆಲದಲ್ಲಿ ಮೋದಿ, ಶಾ ಅವರ ಸಮಾಧಿ ಅಗೆಯುತ್ತೇವೆ ಎಂದು ಘೋಷಣೆ ಕೂಗಿದ್ದಾರೆ. ಈ ಕುರಿತು ದೆಹಲಿ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಪ್ರತಿಕ್ರಿಯಿಸಿ, ನಾನು ಇದನ್ನು ಬಲವಾಗಿ ಖಂಡಿಸುತ್ತೇನೆ. ಈ ದೇಶದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪುಗಳ ವಿರುದ್ಧವೂ ಪ್ರತಿಭಟನೆಗಳು ನಡೆದರೆ, ಇನ್ನೇನು ಉಳಿಯುತ್ತದೆ ಎಂದು ಮಂಜಿಂದರ್ ಸಿಂಗ್ ಸಿರ್ಸಾ ಪ್ರಶ್ನಿಸಿದ್ದಾರೆ.

ಜೆಎನ್‌ಯು ಪ್ರತಿಭಟನಾಕಾರರನ್ನು ಪ್ರತ್ಯೇಕತಾವಾದಿಗಳು ಎಂದು ಕರೆದ ಸಿರ್ಸಾ, ಈ ಜನರಿಗೆ ದೇಶ, ಸಂವಿಧಾನ ಅಥವಾ ಕಾನೂನಿನ ಬಗ್ಗೆ ಯಾವುದೇ ಗೌರವವಿಲ್ಲ. ಇವರು ಪ್ರತ್ಯೇಕತಾವಾದಿಗಳು. ಅವರು ದೇಶವನ್ನು ಒಡೆಯುವ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular