ರಾಮನಗರ: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಅಲ್ಲದೆ ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು ಎಂದಿದ್ದಾರೆ.
ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ತಿಳಿಸಿದರು. ಒಟ್ಟಿನಲ್ಲಿ ಮತ್ತೆ ಹಾಲಿನ ದರ ಏರಿಸುವುದರ ಮೂಲಕ ನಂದಿನಿ ಹಾಲು ಗ್ರಾಹಕರಿಗೆ ಮತ್ತೆ ಶಾಕ್ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.