ಚಿಕ್ಕಬಳ್ಳಾಪುರ: ಇಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆದ್ದುಬೀಗಿದೆ. ಇದೀಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಕೆ.ಸುಧಾಕರ್ ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಗೆ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ, ಮುಂದೆ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ. ಮುಂದಿನ ನಗರಸಭೆ ಚುನಾವಣೆಯಲ್ಲಿ ‘ಕೈ’ ಬಾವುಟ ಹಾರಿಸುತ್ತೇನೆ ಎಂದು ಪ್ರದೀಪ್ ಈಶ್ವರ್ ಕಿಡಿಕಾರಿದರು. ಜೊತೆಗೆ ಕೆ.ಸುಧಾಕರ್ ಅಲ್ಲ, ಅವರ ಅಪ್ಪನ ಕೈಯಲ್ಲೂ ನನ್ನ ಏನೂ ಮಾಡೋಕೆ ಆಗಲ್ಲ. ಆತ ಒಬ್ಬ ಕೋವಿಡ್ ಕಳ್ಳ. ಅವನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೊಡೋಣ ಎಂದು ಸವಾಲ್ ಹಾಕಿದರು. ‘ ನಗರಸಭೆ ಚುನಾವಣೆಗೆ ಸಂಸದ ಕೆ.ಸುಧಾಕರ್ 7 ರಿಂದ 8 ಕೋಟಿ ರೂಪಾಯಿ ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ ಎಂದು ಸುಧಾಕರ್ ವಿರುದ್ದ ವಾಗ್ದಾಳಿ ನಡೆಸಿದರು.