ಬೆಂಗಳೂರು: ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ತಂದೆ ರೇವಣ್ಣ ಜೊತೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ಬಿ. ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರನ್ನು ಮಾಜಿ ಸಚಿವ ಎಚ್. ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ಭೇಟಿ ಮಾಡಿ ಮಾತುಕತೆ ನಡೆಸಿದರು. ಎನ್ ಡಿಎ ಮೈತ್ರಿಕೂಟದ ಜೊತೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಪ್ರಚಾರ ತಂತ್ರದ ಬಗ್ಗೆ ಚರ್ಚಿಸಿದರು.
ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಲೋಕಸಭೆ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾಗಿ ತಿಳಿಸಿದರು. ಇನ್ನೂ ಹಾಸನದ ಬಿಜೆಪಿ ನಾಯಕ ಪ್ರೀತಂ ಗೌಡ ಅವರ ಜೊತೆ ಮಾತನಾಡಿ ಸಮಾಧಾನ ಪಡಿಸುತ್ತೇವೆ ಎಂದರು.
ಹಾಸನ ಕ್ಷೇತ್ರಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಇನ್ನೂ ಘೋಷಣೆಯಾಗಿಲ್ಲ. ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್ ಪಕ್ಷ ಮಾರ್ಚ್ 25ರಂದು ಕೋಲಾರ, ಹಾಸನ ಮತ್ತು ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ.