ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಸಹೋದರ ಡಿ.ಕೆ ಸುರೇಶ್ ಪರವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆಲುವಿನ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿದರು. ಈ ಮೂಲಕ ಸಹೋದರ ಡಿ.ಕೆ ಸುರೇಶ್ ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.