ಮಂಗಳೂರು (ದಕ್ಷಿಣ ಕನ್ನಡ): ಪುತ್ತೂರಿನ ಸಮಗ್ರ ಅಭಿವೃದ್ಧಿ ನಮ್ಮ ಮೂಲ ಉದ್ದೇಶ. ಹೀಗಾಗಿ ಹಗಲು ಇರುಳು ಇದಕ್ಕಾಗಿ ದುಡಿಯುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಈ ರೀತಿಯ ಹೇಳಿಕೆ ನೀಡಿದರು.