ಬಾಗಲಕೋಟ: ಬನಹಟ್ಟಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ರಾಜೇಂದ್ರ ಭದ್ರನ್ನವರ ಅವರಿಗೆ ನೀಡಬೇಕೆಂದು ನೇಕಾರ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, 1980 ರಿಂದ ಇಲ್ಲಿಯ ವರೆಗೆ ಮೂರು ತಲೆ ಮಾರುಗಳಿಂದ ಭದ್ರನ್ನವರ ಕುಟುಂಬದವರು ನೇಕಾರ ಸಮುದಾಯದ ಬಗ್ಗೆ ಬಹಳ ಕಾಳಜಿ ಉಳ್ಳವರು ಮತ್ತು ರಾಜಕೀಯವಾಗಿ ಕಾಂಗ್ರೆಸ್ ಪಕ್ಷ ಗೆಲುವಿಗೆ ಹಾಗೂ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ನೇಕಾರರ ಸಮುದಾಯದವರೊಂದಿಗೆ ಅನೇಕ ಕೆಲಸ ಕಾರ್ಯಗಳಲ್ಲಿ ಹಗಲ- ಇರುಳು ಶ್ರಮಿಸಿದ ಇವರಿಗೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಿಸಬೇಕೆಂದು ನೇಕಾರರ ಸಮುದಾಯ ಒಕ್ಕೂರಲಿನ ಕೂಗು ಸದ್ಯ ರಾಜಕೀಯವಲಯದಲ್ಲಿ ಸದ್ದು ಮಾಡುತ್ತಿದೆ.
ಅವರು ತಮ್ಮದೇ ಆದ ವೈಯಕ್ತಿಕ ವರ್ಚಸ್ಸು ಹೊಂದಿದ್ದು, ಇವರಿಗೆ ರಾಜಕೀಯವಾಗಿ ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ನೇಕಾರ ಕ್ಷೇತ್ರ ಅಭಿವೃದ್ಧಿ ಪಡಿಸಲು ಬನಹಟ್ಟಿ ನೂಲಿನ ಗಿರಣಿ ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ನೇಕಾರರ ಅನೇಕ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ ಅನುಭವವಿದೆ. ಹಾಗಾಗಿ ಸರ್ಕಾರದಲ್ಲಿ ರಾಜಕೀಯ ಪ್ರಾತಿನಿಧ್ಯವನ್ನು ನೀಡಿ ನೇಕಾರ ಸಮುದಾಯವನ್ನು ಮೇಲೆತ್ತುವ ಕಾರ್ಯವನ್ನು ಮಾಡಬೇಕೆಂದು ನೇಕಾರ ಮುಖಂಡರು ಒತ್ತಾಯಿಸಿದ್ದಾರೆ.