Thursday, April 23, 2026
Google search engine

Homeದೇಶಪ.ಬಂಗಾಳ ಚುನಾವಣೆ 2026: ಮೊದಲ ಹಂತದ ಮತದಾನ ಆರಂಭ

ಪ.ಬಂಗಾಳ ಚುನಾವಣೆ 2026: ಮೊದಲ ಹಂತದ ಮತದಾನ ಆರಂಭ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಆರಂಭವಾಗಿದೆ. ರಾಜ್ಯದ 16 ಜಿಲ್ಲೆಗಳ ಒಟ್ಟು 152 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಅಭ್ಯರ್ಥಿಗಳು ಮತ್ತು ಮತದಾರರು: ಮೊದಲ ಹಂತದಲ್ಲಿ ಒಟ್ಟು 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು 3.60 ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.

ಮತಗಟ್ಟೆಗಳ ವಿವರ: ಒಟ್ಟು 44,000ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 7,384 ಕೇಂದ್ರಗಳನ್ನು ‘ಅತಿ ಸೂಕ್ಷ್ಮ’ ಎಂದು ಗುರುತಿಸಲಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.

ಮಹಿಳಾ ಸಬಲೀಕರಣ: ವಿಶೇಷವೆಂದರೆ, 5,444 ಮತಗಟ್ಟೆಗಳ ಸಂಪೂರ್ಣ ಜವಾಬ್ದಾರಿಯನ್ನು ಮಹಿಳಾ ಸಿಬ್ಬಂದಿಗಳೇ ವಹಿಸಿಕೊಂಡಿದ್ದಾರೆ. ಅಲ್ಲದೆ 207 ಮಾದರಿ ಮತಗಟ್ಟೆಗಳನ್ನು ನಿರ್ಮಿಸಲಾಗಿದೆ.

ಮುಂದಿನ ಹಂತ: ಪಶ್ಚಿಮ ಬಂಗಾಳದ ಎರಡನೇ ಹಂತದ ಮತದಾನವು ಮುಂದಿನ ಬುಧವಾರ ನಡೆಯಲಿದೆ.

ಬಂಗಾಳದಲ್ಲಿ ಅಧಿಕಾರ ಹಿಡಿಯಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮತ್ತು ಕಮಲ ಪಡೆ ಹೋರಾಡುತ್ತಿದೆ. (ಏಜೆನ್ಸಿಸ್)

RELATED ARTICLES
- Advertisment -
Google search engine

Most Popular