Friday, April 18, 2025
Google search engine

Homeಅಪರಾಧಪಶ್ಚಿಮ ಬಂಗಾಳ: ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ- ಐವರ ಬಂಧನ

ಪಶ್ಚಿಮ ಬಂಗಾಳ: ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ- ಐವರ ಬಂಧನ

ಜಲ್ಪೈಗುರಿ /ಕೋಲ್ಕತ್ತ: ಜನರ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಥಳಿಸಿದ ಕಾರಣ ಕಾಂಗ್ರೆಸ್ ಕಾರ್ಯಕರ್ತನೊಬ್ಬ  ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಮೊಯಿನಾಗುರಿಯಲ್ಲಿ ಈ ಘಟನೆ ನಡೆದಿದೆ.

ಮಾಣಿಕ್ ರಾಯ್ ಮೃತ ಕಾಂಗ್ರೆಸ್ ಕಾರ್ಯಕರ್ತ. ‌

ಬುಧವಾರ ರಾತ್ರಿ ನೆರೆಹೊರೆಯವರೊಂದಿಗೆ ನಡೆದ ಗಲಾಟೆಯಲ್ಲಿ  ರಾಯ್ ಅವರಿಗೆ ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು  ರಕ್ಷಿಸಿದ  ಪೊಲೀಸರು ಜಲ್ಪೈಗುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರಾಯ್ ಗುರುವಾರ ಮೃತಪಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಹಲ್ಲೆ ಮಾಡಿದವರಲ್ಲಿ ಕೆಲವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಸೇರಿದವರು  ಎಂದು ಮೃತನ ಕುಟುಂಬಸ್ಥರು ಹಾಗೂ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಧೀರ್ ಚೌಧರಿ ಆರೋಪಿಸಿದ್ದಾರೆ. ‌ರಾಯ್‌ಗೆ ಕೆಲ ದಿನಗಳಿಂದ ಕೊಲೆ ಬೆದರಿಕೆಗಳು ಬರುತ್ತಿದ್ದವು ಎಂದೂ ಪತ್ನಿ ತಿಳಿಸಿದ್ದಾರೆ. 

RELATED ARTICLES
- Advertisment -
Google search engine

Most Popular