Sunday, April 20, 2025
Google search engine

Homeರಾಜ್ಯಸುದ್ದಿಜಾಲನಾನು ಧರಿಸಿದ್ದು ನಿಜವಾದ ಹುಲಿ ಉಗುರಲ್ಲ, ಬೇಕಿದ್ದರೆ ಪರಿಶೀಲಿಸಿ: ನಿಖಿಲ್ ಕುಮಾರ್ ಸ್ಪಷ್ಟನೆ

ನಾನು ಧರಿಸಿದ್ದು ನಿಜವಾದ ಹುಲಿ ಉಗುರಲ್ಲ, ಬೇಕಿದ್ದರೆ ಪರಿಶೀಲಿಸಿ: ನಿಖಿಲ್ ಕುಮಾರ್ ಸ್ಪಷ್ಟನೆ

ಬೆಂಗಳೂರು : ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ. ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ ಎಂದು ಹೇಳಿದ್ದಾರೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ನಾನು ಮದುವೆ ಸಮಯದಲ್ಲಿ ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ನೈಜವಾದುದ್ದಲ್ಲ ಎಂದು ನಟ, ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular