Tuesday, January 13, 2026
Google search engine

Homeರಾಜಕೀಯಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ.ಡಾ.ಜಿ.ಪರಮೇಶ್ವರ್

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ.ಡಾ.ಜಿ.ಪರಮೇಶ್ವರ್

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಡಾ.ಜಿ.ಪರಮೇಶ್ವರ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ಸೈದ್ಧಾಂತಿಕವಾಗಿ ಸತೀಶ್ ಜಾರಕಿಹೊಳಿ ಹೆಸರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ.

ಸತೀಶ್ ಜಾರಕಿಹೊಳಿಯವರು ಹಿಂದೆ ಅಹಿಂದ ಚಳುವಳಿಯಲ್ಲಿದ್ದರು. ಅವರಿಗೆ ಆ ಬದ್ಧತೆ ಇದೆ ಎಂದು ಹೇಳಿರಬಹುದು. ಸಿಎಂ ಹುದ್ದೆಯನ್ನು ದೃಷ್ಟಿಯಲ್ಲಿ ಇಟ್ಕೊಂಡು ಅವರು ಹೇಳಿಲ್ಲ ಎಂದು ಹೇಳಿದರು.

ಇದೇ ವೇಳೆ ಸಿಎಂ ರೇಸ್ ನಲ್ಲಿ ತಮ್ಮ ಹೆಸರಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವುದಾದರೂ ರೇಸ್ ಇರಲಿ, ಹೈಕಮಾಂಡ್ ನಿರ್ಧಾರವೇ ಅಂತಿಮ. ಆ ಸಂದರ್ಭ ಬಂದಾಗ CLP ಸಭೆ ಕರೆಯುತ್ತಾರೆ.

ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ಹೈಕಮಾಂಡ್ ಗೆ ವರದಿ ಕೊಟ್ಟ ನಂತರ ಘೋಷಣೆ ಆಗುತ್ತದೆ. ಇದು ಪದ್ಧತಿ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular