Thursday, April 3, 2025
Google search engine

Homeರಾಜಕೀಯಯತ್ನಾಳ್‌ಗೆ ವಿಚಿತ್ರ ಅಲೋಚನೆಗಳು ಎಲ್ಲಿಂದ ಬರುತ್ತೋ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟಾಂಗ್

ಯತ್ನಾಳ್‌ಗೆ ವಿಚಿತ್ರ ಅಲೋಚನೆಗಳು ಎಲ್ಲಿಂದ ಬರುತ್ತೋ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟಾಂಗ್

ಬೆಳಗಾವಿ: ಯತ್ನಾಳ ಅವರು ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಲು ೨ ಸಾವಿರ ಕೋಟಿ, ಸಚಿವರಾಗಲು ೫೦೦ ಕೋಟಿ ಹಣ ಅವರ ಹೈಕಮಾಂಡ್‌ಗೆ ಕೊಡಬೇಕು ಎಂದು ಹೇಳಿದ್ದರು. ಆದರೆ, ಅವರು ಎಲ್ಲಿಂದ ವಿಷಯ ಸಂಗ್ರಹಿಸುತ್ತಾರೆ, ಯಾಕೆ ಹೀಗೆ ಮಾತನಾಡುತ್ತಾರೆ ಎನ್ನುವುದೇ ವಿಚಿತ್ರ. ಇದಕ್ಕೆ ಯತ್ನಾಳ ಅವರೇ ಉತ್ತರಿಸುವುದು ಸೂಕ್ತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು.

ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಸಲು ಕಾಂಗ್ರೆಸ್ ನವರೇ ದಾಖಲೆ ನೀಡುತ್ತಿದ್ದಾರೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಕ್ಕೆ ಅವರು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಹೀಗೆ ಪ್ರತಿಕ್ರಿಯಿಸಿದರು. ನಾವು ಕಾಂಗ್ರೆಸ್ ನವರು, ಅವರು ಬಿಜೆಪಿಯವರು. ಕಾಂಗ್ರೆಸ್ ಮುಖ್ಯಮಂತ್ರಿಯನ್ನು ಅವರು ಮಾಡುತ್ತಾರೆ ಎಂದರೆ, ಸೂರ್ಯ ಪೂರ್ವದ ಬದಲು ಪಶ್ಚಿಮ ದಿಕ್ಕಿನಲ್ಲಿ ಹುಟ್ಟುತ್ತಾನೇನೋ ಎನ್ನುವ ಭಾವನೆ ಬರುತ್ತಿದೆ ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ, ಡಿಸಿಎಂ ಭೇಟಿ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಅವರು ಭೇಟಿ ನೀಡಿಲ್ಲ ಎಂಬ ಮಾತ್ರಕ್ಕೆ ಪ್ರವಾಹದ ಬಗ್ಗೆ ಮಾಹಿತಿ ಇಲ್ಲ ಎಂದಲ್ಲ. ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಬಂಧಪಟ್ಟ ಜಲಾಶಯಗಳ ಉಸ್ತುವಾರಿ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಸಂತ್ರಸ್ತರಿಗೆ ಅಗತ್ಯ ಸೌಕರ್ಯ ಕಲ್ಪಿಸುವಂತೆ ಸೂಚಿಸಿದ್ದಾರೆ. ೨೦೧೯ರಲ್ಲಿ ಬೆಳಗಾವಿ ಭೀಕರ ಪ್ರವಾಹ ಸಂಭವಿಸಿತ್ತು. ಆಗ ಪ್ರಧಾನಮಂತ್ರಿ ಇತ್ತ ತಿರುಗಿಯೂ ನೋಡಲಿಲ್ಲ. ಆದರೆ ಸಿಎಂ ಮತ್ತು ಡಿಸಿಎಂ ಅವರಿಗೆ ಬಹಳ ಕಳಕಳಿ ಇದೆ, ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು.

ಬೆಳಗಾವಿ ಜಿಲ್ಲೆಯಲ್ಲಿ ಮನೆ, ಬ್ಯಾರೇಜ್ ಹಾಗೂ ಸೇತುವೆ ಎಷ್ಟು ಬಿದ್ದಿವೆ ಎಂಬ ಬಗ್ಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ. ನಾನೇ ಖುದ್ದಾಗಿ ಖಾನಾಪುರಕ್ಕೆ ಹೋದಾಗ ಪರಿಶೀಲನೆ ಮಾಡಿದ್ದೇನೆ. ದಾಖಲೆಗಿಂತ ವಾಸ್ತವದಲ್ಲಿ ಹೆಚ್ಚು ಮನೆಗಳು ಬಿದ್ದಿವೆ. ಅಧಿಕಾರಿಗಳು ಬೇಜವಾಬ್ದಾರಿಯಿಂದ ಕೆಲಸ ಮಾಡಬಾರದು. ಈ ಕುರಿತು ಸಧ್ಯವೇ ಪರಿಶೀಲನೆ ಸಭೆ ನಡೆಸಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು

RELATED ARTICLES
- Advertisment -
Google search engine

Most Popular