ಬೆಂಗಳೂರು: ನಗರದ 500 ಕಿಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ಸುಮಾರು 3 ವರ್ಷದೊಳಗೆ 1,700 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 500 ಕಿ.ಮೀ. ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡುವ ನಿರ್ಧಾರ ಕೈಗೊಂಡಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಅಲ್ಲದೆ ಬೆಂಗಳೂರು ನಗರದಲ್ಲಿ 1700 ಕೋಟಿ ರೂ. ವೆಚ್ಚದಲ್ಲಿ 145 ಕಿ.ಮೀ. ಉದ್ದದ ರಸ್ತೆಗಳ ಅಭಿವೃದ್ಧಿ, ಜನಸ್ನೇಹಿ ಪಾದಾಚಾರಿ ವ್ಯವಸ್ಥೆಯೊಂದಿಗೆ ವೈಟ್ ಟಾಪಿಂಗ್ ಅಳವಡಿಸಿ ಸಮಗ್ರವಾಗಿ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿರುವ ಕಾರಣ ಜನರು, ಉದ್ಯಮಿಗಳು ಸರ್ಕಾರನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಬೆನ್ನಲ್ಲೇ ಸರ್ಕಾರ ವೈಟ್‌ಟ್ಯಾಪಿಂಗ್ ಮಾಡುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದರು.



