Sunday, April 20, 2025
Google search engine

Homeಅಪರಾಧವಿಟ್ಲ: ಸರಕಾರಿ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಪತ್ತೆ

ವಿಟ್ಲ: ಸರಕಾರಿ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಪತ್ತೆ

ವಿಟ್ಲ: ಇಲ್ಲಿನ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ಸೋಮವಾರ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಇಂದು ಬೆಳಗ್ಗೆ ಪುತ್ತೂರಿನಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ದೀಕ್ಷೀತ್(15) ಮತ್ತು ಗಗನ್(14) ಎಂಬವರು ಪತ್ತೆಯಾಗಿರುವ ವಿದ್ಯಾರ್ಥಿಗಳು. ಇವರು ಆ.21ರಂದು ಶಾಲೆಗೆಂದು ವಿದ್ಯಾರ್ಥಿ ನಿಲಯದಿಂದ ತೆರಳಿದವರು ಶಾಲೆಗೂ ಹೋಗದೇ ವಾಪಸ್ ವಿದ್ಯಾರ್ಥಿ ನಿಲಯಕ್ಕೂ ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಪ್ರಮೀಳಾ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ವಿಟ್ಲ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಇಂದು ಬೆಳಗ್ಗೆ ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ. ಹಾಸ್ಟೆಲ್ ನಲ್ಲಿ ನಿಲ್ಲಲು ಇಷ್ಟವಾಗದ ಕಾರಣ ದೀಕ್ಷೀತ್ ಮತ್ತು ಗಗನ್ ಮನೆ ಕಡೆಗೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular