Tuesday, April 22, 2025
Google search engine

Homeರಾಜಕೀಯಮೋದಿ ಪ್ರಧಾನಿಯಾಗುವುದನ್ನು ಯಾರು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

ಮೋದಿ ಪ್ರಧಾನಿಯಾಗುವುದನ್ನು ಯಾರು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

ಶಿಕಾರಿಪುರ: ನರೇಂದ್ರ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿ ಆಗುವುದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಈಸೂರು ಗ್ರಾಮದಲ್ಲಿ ಬುಧವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಜಗತ್ತು ಮೆಚ್ಚುವ ರೀತಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ನಡೆಸಿದ್ದಾರೆ. ಮತ್ತೂಮ್ಮೆ ಮೋದಿ ಗ್ಯಾರಂಟಿ ಶಾಶ್ವತವಾಗಿರುತ್ತದೆ. ಆದರೆ ರಾಜ್ಯ ಸರ್ಕಾರದ ಗ್ಯಾರಂಟಿ ತಾತ್ಕಲಿಕವಾಗಿದೆ. ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ಅಪಪ್ರಚಾರ ಮಾಡುವುದು ಹೆಚ್ಚಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರ ಕೊನೆ ಅಸ್ತ್ರ ಅಪಪ್ರಚಾರವಾಗಿದ್ದು, ಅದಕ್ಕೆ ಯಾರೂ ಕಿವಿಗೋಡಬೇಡಿ ಎಂದು ಮನವಿ ಮಾಡಿದರು.

ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೇ ಮಾರ್ಗ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇವೆ. ತಾಲೂಕಿನ ನೀರಾವರಿ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಿದ್ದೇವೆ. ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಅಭಿವೃದ್ಧಿಪಡಿಸಿದ್ದೇವೆ. ಸಂಸದನಾಗಿ ಜಿಲ್ಲೆ ಹಾಗೂ ತಾಲೂಕಿನ ಸರ್ವಾಂಗೀಣಾ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದರು.

ವಿಧಾನ ಪರಿಷತ್‌ ಸದಸ್ಯೆ ನಟಿ ತಾರಾ ಅನುರಾಧಾ, ದೇಶದ ರಕ್ಷಣೆ ಹಾಗೂ ಅಭಿವೃದ್ಧಿ ಪ್ರಧಾನಿ ನರೇಂದ್ರಮೋದಿ ಆದ್ಯತೆ ನೀಡಿದ್ದಾರೆ. ದೇಶಕ್ಕೆ ನರೇಂದ್ರ ಮೋದಿ, ಶಿವಮೊಗ್ಗ ಜಿಲ್ಲೆಗೆ ರಾಘವೇಂದ್ರ ಆಯ್ಕೆಯಾಗಬೇಕು. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ 56ವರ್ಷಗಳ ಸುದೀರ್ಘ‌ ರಾಜಕಾರಣದಲ್ಲಿ ಕೆಲವೇ 5ವರ್ಷ ಮುಖ್ಯಮಂತ್ರಿಯಾಗಲು ಅವಕಾಶ ದೊರೆಯಿತು. ಈ ಸಂದರ್ಭದಲ್ಲಿ ಯಡಿಯೂರಪ್ಪ ತಮ್ಮ ಹೆಸರು ಜನರ ಮಧ್ಯೆ ಉಳಿಯುವಂತೆ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ವಿಧಾನ ಪರಿಷತ್‌ ಸದಸ್ಯ ರುದ್ರೇಗೌಡ್ರು, ಸಂಸದ ರಾಘವೇಂದ್ರ ಪತ್ನಿ ತೇಜಸ್ವಿನಿ, ಮುಖಂಡರಾದ ಹುಲ್ಮಾರ್‌ ಮಹೇಶ್‌, ಅರುಂಧತಿ ರಾಜೇಶ್‌, ಚುರ್ಚಿಗುಂಡಿ ರುದ್ರಮುನಿ, ಹಿತ್ತಲ ಪರಮೇಶ್ವರಪ್ಪ, ಚುರ್ಚಿಗುಂಡಿ ಶಶಿಧರ್‌, ವೀರೇಂದ್ರ ಪಾಟೀಲ್‌, ಜಗದೀಶ್‌, ಜೆಡಿಎಸ್‌ ತಾಲೂಕು ಘಟಕ ಅಧ್ಯಕ್ಷ ಬೆಂಕಿ ಯೋಗೀಶ್‌ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular