ಮಂಗಳೂರು (ದಕ್ಷಿಣ ಕನ್ನಡ) : ಕಾಡಿನಿಂದ ನಾಡಿಗೆ ಕಾಡಾನೆಗಳು ಬಂದು ಆತಂಕ ಸೃಷ್ಟಿ ಮಾಡಿದೆ. ಹೌದು. ದಕ್ಷಿಣ ಕನ್ನಡ ಜಿಲ್ಲೆಯ ಸರಳಿಕಟ್ಟೆ ಸಮೀಪ ನೇತ್ರಾವತಿ ನದಿಯಲ್ಲಿ ಎರಡು ಆನೆಗಳು ಜಲಕ್ರೀಡೆ ಆಡುತ್ತಿರುವುದು ಬೆಳಕಿಗೆ ಬಂದಿದೆ. ರಾತ್ರಿ ವೇಳೆಯಲ್ಲಿ ಪೆರ್ನೆ ಎಂಬ ಊರಿನ ಸಮೀಪ ಅನೇಕ ಕೃಷಿಕರ ತೋಟದಲ್ಲಿ ಸುತ್ತಾಡಿದ್ದು, ಇಂದು ಬೆಳಿಗ್ಗೆಯಿಂದ ಸರಳಿಕಟ್ಟೆ ನೇತ್ರಾವತಿ ನದಿಯಲ್ಲಿ ಕಾಡಾನೆಗಳು ಕಾಣಿಸಿಕೊಂಡಿದೆ.
ಇದೀಗ ಆನೆಗಳು ನಾಡಿಗೆ ಬಂದಿರುವುದರ ಬಗ್ಗೆ ಜನರಿ ಭಯಭೀತರಾಗಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ ಮತ್ತು ಪುತ್ತೂರು ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಂಟ್ವಾಳದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೊನೆಗೂ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಆನೆಗಳು ನದಿಯಲ್ಲಿರುವ ಕಾರಣಕ್ಕೆ ಗ್ರಾಮಸ್ಥರು ಯಾರೂ ಕೂಡ ನದಿ ತೀರದತ್ತ ಬಾರದಂತೆ ಎಚ್ಚರಿಕೆ ನೀಡಲಾಗಿದೆ.
ಆನೆಗಳನ್ನು ಮತ್ತೆ ಕಾಡಿಗೆ ಓಡಿಸುವ ಕಾರ್ಯಕ್ಕೆ ಅರಣ್ಯ ಇಲಾಖೆ ಮುಂದಾಗಿದೆ.