ಎಚ್.ಡಿ.ಕೋಟೆ :ಅಂತಾರಾಷ್ಟ್ರೀಯ ಹುಲಿ ದಿನಾಚರಣೆ ಅಂಗವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆಯಲ್ಲಿ ವನ್ಯಜೀವಿ ಛಾಯಾಗ್ರಾಹಕ ಜಕ್ಕಳ್ಳಿಯ ಜಿ ಮುರಳಿಧರ್ ಅವರಿಗೆ ಮೊದಲ ಬಹುಮಾನ ಲಭಿಸಿದೆ.
ಹುಲಿ ದಿನಾಚರಣೆ ಅಂಗವಾಗಿ ಎಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆಯ ರೇಂಜಿನ ಅವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಪ್ರಶಸ್ತಿ ನೀಡಿ ಸನ್ಮಾನಿಸಿದರು.
ವನ್ಯಪ್ರಾಣಿಗಳ ಮೂರು ವಿಭಾಗದ ಸ್ಪರ್ಧೆಯಲ್ಲಿ ಪ್ರಾಣಿಗಳ ನಡವಳಿಕೆ(Animal Behaviour) ವಿಭಾಗದಲ್ಲಿ ಮೊದಲ ಬಹುಮಾನ ಗಳಿಸಿದ್ದು 20,000 ರೂ. ನಗದು ಬಹುಮಾನ ಪಡೆದಿದ್ದಾರೆ.