Friday, April 18, 2025
Google search engine

Homeರಾಜ್ಯಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ?: ಟ್ವೀಟ್ ಮಾಡಿ ಕಾಲೆಳೆದ ಪ್ರತಾಪ್ ಸಿಂಹ

ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ?: ಟ್ವೀಟ್ ಮಾಡಿ ಕಾಲೆಳೆದ ಪ್ರತಾಪ್ ಸಿಂಹ

ಬೆಂಗಳೂರು: ಕರ್ನಾಟಕ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಫಲಕೊಟ್ಟಿದೆ. 28 ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಗೆದ್ದರೆ ತಾವು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಮಾಧ್ಯಮಗಳ ಮುಂದೆ ಮಾತನಾಡಿದ್ದರು.

ಈ ಹಿಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಖಚಿತವಾಗಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಗಿಂತ ಡಾ. ಸುಧಾಕರ್ 1 ಮತ ಹೆಚ್ಚಿಗೆ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದ್ದರು.

ಇದೀಗ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 8,19,588 ಮತಗಳನ್ನು ಪಡೆದು 1,62,099 ಮತಗಳ ಅಂತರದಿಂದ ಬೃಹತ್ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ 6,57,489 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ಮಾತನಾಡಿದ್ದ ವಿಡಿಯೋ ತುಣುಕನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.

RELATED ARTICLES
- Advertisment -
Google search engine

Most Popular