Sunday, April 20, 2025
Google search engine

HomeUncategorizedರಾಷ್ಟ್ರೀಯಎನ್ ​ಆರ್ ​ಸಿ, ಸಿಎಎ ಜಾರಿಯಾಗಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಎನ್ ​ಆರ್ ​ಸಿ, ಸಿಎಎ ಜಾರಿಯಾಗಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ದೇಶಕ್ಕಾಗಿ ರಕ್ತಹರಿಸಲು ಸಿದ್ಧ ಆದರೆ ಎನ್ ​ಆರ್ ​ಸಿ, ಸಿಎಎ ಜಾರಿಯಾಗಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈದ್ ಪ್ರಾರ್ಥನೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದ ಅವರು, ಚುನಾವಣೆಯ ಸಮಯದಲ್ಲಿ ಕೆಲವರ ಸಂಚುಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡಿದರು.

ನಾವು ದೇಶಕ್ಕಾಗಿ ರಕ್ತ ಹರಿಸಲು ಸಿದ್ಧರಿದ್ದೇವೆ ಆದರೆ ಹಿಂಸೆಯನ್ನು ಸಹಿಸುವುದಿಲ್ಲ. ದೇಶಕ್ಕಾಗಿ, ಏಕರೂಪ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ನಾನು ಎಲ್ಲಾ ಧರ್ಮಗಳಲ್ಲಿ ಸಾಮರಸ್ಯವನ್ನು ಬಯಸುತ್ತೇನೆ, ನಾವು ಒಗ್ಗಟ್ಟಿನಿಂದ ಬದುಕಿದರೆ, ಯಾರೂ ನಮಗೆ ಹಾನಿ ಮಾಡಲು ಸಾಧ್ಯವಾಗುವುದಿಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದೆ ಎಂದು ಸಿಎಂ ಮಮತಾ ಆರೋಪಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರು ಈ ಹಿಂದೆ ರಾಜ್ಯದಲ್ಲಿ ಸಿಎಎ ಜಾರಿಗೆ ತರುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದರೆ ಅವರನ್ನು ವಿದೇಶಿಯರೆಂದು ಗೊತ್ತುಪಡಿಸಲಾಗುತ್ತದೆ ಎಂದು ಎಚ್ಚರಿಸಿದ್ದರು.

RELATED ARTICLES
- Advertisment -
Google search engine

Most Popular