ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಮತ್ತು ದೇಶದ ಅಭಿವೃದ್ಧಿಗಾಗಿ ನನ್ನನ್ನು ಬೆಂಬಲಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೋರಿದರು. ನಗರದ ಸರಸ್ವತಿಪುರಂನಲ್ಲಿರುವ ರಾಜ್ಯ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಎಂ.ಅಪ್ಪಣ್ಣ ಅವರ ಕಚೇರಿಗೆ ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿ ಬೆಂಬಲ ಕೋರಿದ ನಂತರ ಅವರು ಮಾತನಾಡಿದರು.
ನಾಯಕ ಸಮಾಜ ಮಹಾರಾಜರ ಕಾಲದಿಂದಲೂ ಬೆಂಬಲ ನೀಡುತ್ತಲೇ ಬಂದಿದೆ. ಬಾರಿ ನಾನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದೇನೆ. ಎಲ್ಲರೂ ಸಹಕಾರ ಕೊಡಬೇಕು ಎಂದರು.