ಮೈಸೂರು: ‘ವಿಕಸಿತ ಭಾರತ ನಿರ್ಮಾಣಕ್ಕೆ, ಮಹತ್ವಪೂರ್ಣ ಬದಲಾವಣೆಗಾಗಿ ಬಿಜೆಪಿಯೊಂದಿಗೆ ಜೊತೆಯಾಗಿರಿ’ ಎಂದು ಮಾಜಿನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಹೇಳಿದರು.
ಬಿಜೆಪಿ ವತಿಯಿಂದ ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 23ರ ಮಾಜಿನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ನೇತೃತ್ವದಲ್ಲಿ ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಮೀಪ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ನೋಂದಣಿ ಮಾಡಿಸಿ ಮಾತನಾಡಿದ ಅವರು, ‘ಸದಸ್ಯತ್ವ ಅಭಿಯಾನ ಅಭೂತಪೂರ್ವವಾಗಿ ನಡೆಯುತ್ತಿದೆ ಎಂದರು.
ವಿಜಯ ಸಂದರ್ಭದಲ್ಲಿ ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸುರೇಶ್, ವಿಘ್ನೇಶ್ವರ ಭಟ್, ಸುದರ್ಶನ್, ಚರಣ್, ಶ್ರೀನಿವಾಸ್, ರಾಮು, ಸುಚೇಂದ್ರ, ಹಾಗೂ ಇನ್ನಿತರರು ಹಾಜರಿದ್ದರು.