Sunday, April 20, 2025
Google search engine

Homeರಾಜ್ಯಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಿಕ್ಕ ತಕ್ಷಣ ಅರೆಸ್ಟ್- ಗೃಹ ಸಚಿವ ಜಿ. ಪರಮೇಶ್ವರ್

ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಿಕ್ಕ ತಕ್ಷಣ ಅರೆಸ್ಟ್- ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿರುವ ಭವಾನಿ ರೇವಣ್ಣ ಅವರನ್ನು ಸಿಕ್ಕ ತಕ್ಷಣ ಅರೆಸ್ಟ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಎಸ್ ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಅವರು ಸಿಕ್ಕಾಗ ಬಂಧಿಸಲಾಗುವುದು, ಕಾನೂನು ಪ್ರಕಾರ ಏನು ಕ್ರಮ ಆಗಲಿದೆ ಎಂದು ತಿಳಿಸಿದ್ದಾರೆ.

ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಸಿಗದೆ ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆಂದು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ತೆರಳಿದ ವೇಳೆ ಭವಾನಿ ರೇವಣ್ಣ ಅಲ್ಲಿರಲಿಲ್ಲ. ೧೫ ದಿನಗಳ ಹಿಂದೆಯೇ ಅವರು ನಿಗೂಢ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಈ ನಡುವೆ ಜಾಮೀನು ಅರ್ಜಿಗಾಗಿ ನಾಳೆ ಭವಾನಿ ರೇವಣ್ಣ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಬಂಧನದ ಭೀತಿಯಲ್ಲಿರುವ ಅವರು ನಾಳೆ ಜಾಮೀನು ಅರ್ಜಿ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದು, ಬಳಿಕ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular