ಹಾವೇರಿ: ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ನಗರದ ವೀರಾಪುರ ಆಸ್ಪತ್ರೆಯಲ್ಲಿ ನಡೆದಿದೆ.
ಬ್ಯಾಡಗಿ ಪಟ್ಟಣದ ಶಮಿನಾ ಬಾನು ಅರಳಿಕಟ್ಟಿ(23) ಮೃತ ಮಹಿಳೆ.
ಮೆಡಿಸಿನ್ ಓವರ್ ಡೋಸ್ ಮತ್ತು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವಿರುದ್ಧ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.