Thursday, April 3, 2025
Google search engine

Homeಅಪರಾಧಕಾಲ್ತುಳಿತದಲ್ಲಿ ಮಹಿಳೆ ನಿಧನ: ನಟ ಅಲ್ಲು ಅರ್ಜುನ್ ಬಂಧನ

ಕಾಲ್ತುಳಿತದಲ್ಲಿ ಮಹಿಳೆ ನಿಧನ: ನಟ ಅಲ್ಲು ಅರ್ಜುನ್ ಬಂಧನ

ನವದೆಹಲಿ: ಹೈದರಾಬಾದ್‌ ಕಾಲ್ತುಳಿತದ ವೇಳೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್​ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್​ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್​ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ.

RELATED ARTICLES
- Advertisment -
Google search engine

Most Popular