Monday, April 21, 2025
Google search engine

Homeಅಪರಾಧಡಿ.ಕೆ ಸುರೇಶ್ ಸಹೋದರಿಯೆಂದು ಹೇಳಿ ಮಹಿಳೆಯಿಂದ 8 ಕೋಟಿ ವಂಚನೆ

ಡಿ.ಕೆ ಸುರೇಶ್ ಸಹೋದರಿಯೆಂದು ಹೇಳಿ ಮಹಿಳೆಯಿಂದ 8 ಕೋಟಿ ವಂಚನೆ

ಬೆಂಗಳೂರು: ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ ಮಳಿಗೆ ಮಾಲೀಕರಿಗೆ ೮ ಕೋಟಿ ರೂಪಾಯಿಗಿಂತಲೂ ಅಧಿಕ ಮೊತ್ತದ ವಂಚನೆ ಮಾಡಿರುವ ಬಗ್ಗೆ ವರದಿಯಾಗಿದ್ದು, ಈ ಬಗ್ಗೆ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರಾದ ವನಿತಾ ಐತಾಳ್ ಎಂಬುವವರು ಐಶ್ವರ್ಯಾ ಗೌಡ ಎಂಬ ಮಹಿಳೆಯ ವಿರುದ್ಧ ದೂರು ನೀಡಿದ್ದಾರೆ. ಐಶ್ವರ್ಯಾ ಜತೆ ನಟ ಧರ್ಮೇಂದ್ರ ಹಾಗೂ ಹರೀಶ್ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಐಶ್ವರ್ಯಾ ಗೌಡ ೨೦೨೩ರ ಅಕ್ಟೋಬರ್ ನಿಂದ ೨೦೨೪ ಏಪ್ರಿಲ್ ವರೆಗೆ ಹಂತ ಹಂತವಾಗಿ ೮ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನ ಖರೀದಿ ಮಾಡಿದ್ದಾರೆ. ಚಿನ್ನದ ಹಣ ಪಾವತಿಗೆ ಕೇಳಿದ ಸಂದರ್ಭದಲ್ಲಿ ಡಿ.ಕೆ ಸುರೇಶ್ ಅವರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದ್ದರಂತೆ. ಜತೆಗೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಕರೆ ಮಾಡಿಸಿ ಕೊಲೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ವನಿತಾ ಐತಾಳ್ ತಿಳಿಸಿದ್ದಾರೆ.

ಐಶ್ವರ್ಯ ಗೌಡ ಅವರ ಪತಿ ಹರೀಶ್ ಕೆ.ಎನ್ ಕೂಡ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಡಿ.ಕೆ ಸುರೇಶ್ ತಂಗಿ, ನನಗೆ ಅನೇಕ ರಾಜಕೀಯ ವ್ಯಕ್ತಿಗಳ ಸಂಪರ್ಕವಿದೆ. ನಾನು ದೊಡ್ಡ ಬ್ಯುಸಿನೆಸ್ ವುಮೆನ್. ನಿಮಗೆ ಒಳ್ಳೆ ವ್ಯಾಪಾರ ವಹಿವಾಟು ನೀಡುತ್ತೇನೆ ಎಂದೆಲ್ಲ ಹೇಳಿ ವನಿತಾ ಅವರನ್ನು ಐಶ್ವರ್ಯ ನಂಬಿಸಿದ್ದರು ಎನ್ನಲಾಗಿದೆ. ಸಧ್ಯ ಘಟನೆ ಬಗ್ಗೆ ಚಂದ್ರ ಲೇಔಟ್‌ನಲ್ಲಿರುವ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಅವರು ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular