ಬೆಂಗಳೂರು : ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಭವಾನಿ ರೇವಣ್ಣಗೆ ಜಾಮೀನು ಷರತ್ತು ಸಡಿಲಿಕೆ ನೀಡಿ ಆದೇಶ ಹೊರಡಿಸಿದೆ.
ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಭೇಟಿಗೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ 15 ದಿನಗಳ ಕಾಲ ಹಾಸನ, ಮೈಸೂರು ಭೇಟಿಗೆ ಅವಕಾಶ ಮಾಡಿಕೊಟ್ಟಿದೆ. ಸಾಕ್ಷಿಗಳ ಭೇಟಿ ಸೇರಿ ಜಾಮೀನು ಷರತ್ತು ಉಲ್ಲಂಘಿಸಬಾರದು. ಉಲ್ಲಂಘಿಸಿದ್ರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸದ್ಯ ಅರ್ಜಿಯ ವಿಚಾರಣೆಯನ್ನು ಜನವರಿ 9 ಕ್ಕೆ ನಿಗದಿಪಡಿಸಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.