Monday, April 21, 2025
Google search engine

Homeರಾಜ್ಯಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ ಬಿಜೆಪಿ ಸತ್ಯಶೋಧನಾ ಸಮಿತಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ ಬಿಜೆಪಿ ಸತ್ಯಶೋಧನಾ ಸಮಿತಿ

ಬೆಳಗಾವಿ: ತಾಲ್ಲೂಕಿನ ಹೊಸ ವಂಟಮುರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಥಳಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ಸತ್ಯಶೋಧನಾ ಸಮಿತಿ ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು.

ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಭೇಟಿಯಾದ ಸಂಸದೆಯರಾದ ಅಪರಜಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ ಹಾಗೂ ಪಕ್ಷದ ರಾಷ್ಟ್ರೀಯ ಘಟಕದ ಕಾರ್ಯದರ್ಶಿ ಆಶಾ ಲಾಕ್ರ ಅವರು, ಪ್ರಕರಣದ ಕುರಿತಾಗಿ ಮಾಹಿತಿ ಕಲೆಹಾಕಿದರು.

ಸಂಸದೆ ಮಂಗಲಾ ಅಂಗಡಿ, ಶಾಸಕಿ ಶಶಿಕಲಾ ಜೊಲ್ಲೆ, ಮೇಯರ್ ಶೋಭಾ ಸೋಮನಾಚೆ, ಉಪಮೇಯರ್ ರೇಷ್ಮಾ ಪಾಟೀಲ, ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯೆ ಉಜ್ವಲಾ ಬಡವಣಾಚೆ ಮತ್ತಿತರರು ಇದ್ದರು.

ಇಲ್ಲಿಂದ ಹೊಸ ವಂಟಮೂರಿ ಗ್ರಾಮ ಹಾಗೂ ಕಾಕತಿ ಪೊಲೀಸ್ ಠಾಣೆಗೆ ಸಮಿತಿ ಭೇಟಿ‌ ಕೊಡಲಿದೆ. ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ವರದಿ ಸಲ್ಲಿಸಲಿದೆ.

RELATED ARTICLES
- Advertisment -
Google search engine

Most Popular