ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳಾದ ಅಬ್ದುಲ್ ಹುಲಿ ಕಂಪ್ಯೂಟರ್ ಆಪರೇಟರ್ ಸ್ವಾಮಿಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆ ಎನ್ನುವವರಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಬ್ದುಲ್ ವಲಿ ಮತ್ತು ಸೌಮ್ಯ ಶಕುಂತಲಾ ಬಳಿ 30,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. 15000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲಕ್ಕೆ ಬಿದ್ದಿದ್ದಾರೆ.
ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ ವೇಳೆ ಸೌಮ್ಯ ಬಡಿಗೇರ್ ಅಸ್ವಸ್ಥರಾಗಿದ್ದಾರೆ. ತಕ್ಷಣ ಕಚೇರಿಗೆ ವೈದ್ಯರೇನ್ನು ಕರೆಸಿ ಸೌಮ್ಯ ಅವರಿಗೆ ಚಿಕಿತ್ಸೆ ಕೊಡಿಸಲಾಗಿತು. ಲೋಕಾಯುಕ್ತ ಪೊಲೀಸರು ಸದ್ಯಕ್ಕೆ ಅಬ್ದುಲ್ ವಲಿ ಮತ್ತು ಸೌಮ್ಯ ಬಡಿಗೇರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ