Sunday, March 29, 2026
Google search engine

Homeರಾಜ್ಯಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ: ಮಮತಾ ಗಟ್ಟಿ

ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ: ಮಮತಾ ಗಟ್ಟಿ

ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ,ಜಿಲ್ಲೆಯ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯನ್ನು ಕಷ್ಟಪಟ್ಟು ಎಚ್ಚರಿಕೆ ಯಿಂದ ಮಾಡುತ್ತಾ ಬಂದಿದ್ದಾರೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ಮಹಿಳಾ ದಿನಾಚರಣೆಯ ಅಂಗವಾಗಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಛೇರಿ ಸಭಾಂಗಣ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು
ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರುಇದರ ಸಂಯುಕ್ತ ಆಶ್ರಯ ದಲ್ಲಿಮಹಿಳಾ ದಿನಾಚರಣೆ ಮತ್ತುಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ, ಮಹಿಳಾ ಸಾಧಕರಿಯರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಹಿಳೆ ಕುಟುಂಬದಲ್ಲಿ ವಿವಿಧ ರೀತಿಯಲ್ಲಿ ಕುಟುಂಬದ ಸಮಾಜದ ಶಕ್ತಿಯಾಗಿದ್ದಾರೆ. ಸರಕಾರದ ಗ್ಯಾರಂಟಿ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತಿದೆ ಇದರಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ ಯಾಗುತ್ತದೆ ಎಂದರು. ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಪೊಲೀಸ್ ಸಹಾಯಕ ಆಯಕ್ತೆ ನಜ್ಮಾ ಫಾರೂಕಿ ಮಾತನಾಡುತ್ತಾ,
ತೊಟ್ಟಿಲು ತೂಗುವ ಕೈ ಜಗತ್ತು ಆಳುತ್ತವೆ ಎನ್ನುವ ಮಾತಿನಂತೆ ಮಹಿಳೆಯರು ದೇಶದಲ್ಲಿ ಸಾಧನೆ ಮಾಡಿದ್ದಾರೆ.ಆದರೆ ಇನ್ನೂ ಸಾಕಷ್ಟು ಹಿಂದುಳಿದ ಪ್ರದೇಶದಲ್ಲಿ ಮಹಿಳೆಯರು ಸ್ಥಾನ ಮಾನ ಪಡೆಯಲು ಕಷ್ಟ ಪಡುತ್ತಿದ್ದಾರೆ.ಈ ಪರಿಸ್ಥಿತಿ ಬದಲಾಗ ಬೇಕಾ ಗಿದೆ. ಪೊಲೀಸ್ ಇಲಾಖೆ ಮಹಿಳೆಯರ ರಕ್ಷಣೆಗೆ ಗುಲಾಬಿ ಹೊಯ್ಸಳ ಪೊಲೀಸ್ ತಂಡ ಇದೆ.ಮಹಿಳಾ ಸುರಕ್ಷತೆ ಪೊಲೀಸರ ಜೊತೆ ಸಾಮೂಹಿಕ ಜವಾಬ್ದಾರಿ ವಹಿಸಬೇಕಾಗಿದೆ ಎಂದರು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿ
ಜಯಲಕ್ಷ್ಮಿ ರಾಯಕೋಡ್ ಮಾತನಾಡುತ್ತಾ ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ನಡೆಯುತ್ತಿದೆ.
ಮಹಿಳಾ ಸಶಕ್ತತೆಗೆ ಪುರುಷ ಮಹಿಳೆ ಪರಸ್ಪರ ಸಮಾನವಾಗಿ, ಪೂರಕವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ಸಮಾರಂಭದಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಎ,ದಕ್ಷಿಣ ಕನ್ನಡ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶಕುಂತಳ ಸಹಾಯಕ ಪೊಲೀಸ್ ಆಯುಕ್ತರಾದ ( ಸಂಚಾರ ಉಪವಿಭಾಗ, ಮಂಗಳೂರು) ನಜ್ಮಾ ಫಾರೂಕಿ ಸಾಧಕರಿಗೆ ಸನ್ಮಾನ ಮಾಡಿದ್ದಾರೆ. ಅತಿಥಿಗಳಾಗಿ ರೊ. ಪ್ರೊ. ಡಾ| ಚಿನ್ನಗಿರಿ ಗೌಡ,( ಅಸಿಸ್ಟೆಂಟ್ ಗವರ್ನರ್ ವಲಯ-2 ರೋಟರಿ ಜಿಲ್ಲೆ 3181), ರಜನಿ ಭಟ್, (ಅಸಿಸ್ಟೆಂಟ್ ಗವರ್ನರ್, ವಲಯ-3 ರೋಟರಿ ಜಿಲ್ಲೆ 3181)
ಶ್ರೀಮತಿ ಚಂದ್ರಿಕಾ ಎಸ್. ನಾಯಕ್, (ಅಭಿವೃದ್ಧಿ ನಿರೀಕ್ಷಕರು, ಮಹಿಳಾ ಅಭಿವೃದ್ಧಿ ನಿಗಮ,)ಸತೀಶ್ ಮೊಬೆನ್, (ಜಿಲ್ಲಾ ಸಂಪನ್ಮೂಲ ವ್ಯಕ್ತಿ, ಪಿ.ಎಂ.ಎಫ್.ಎ.ಇ. ಯೋಜನೆ, ದ.ಕ. ಜಿಲ್ಲೆ, ಮಂಗಳೂರು ) ಪುಷ್ಪರಾಜ್ ಬಿ.ಎನ್.(ಅಧ್ಯಕ್ಷರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು. ಸಮಾರಂಭದಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಘಟಕದ ಅಧ್ಯಕ್ಷ ಭಾಸ್ಕರ ರೈ ಕಟ್ಟ ಸ್ವಾಗತಿಸಿದರು.
ಭಾಗವಹಿಸಲಿದ್ದಾರೆ.ಮಾಜಿ ರೋಟರಿ ಅಸಿಸ್ಟೆಂಟ್ ಗವರ್ನರ್ ರಾಜಗೋಪಾಲ ರೈ,ಮಾಜಿ ಅಧ್ಯಕ್ಷ ಸಂತೋಷ್ ಶೇಟ್,ರಾಜೇಶ್ ಶೆಟ್ಟಿ, ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ರೋಟರಿ ಪದಾಧಿಕಾರಿಗಳಾದ ಜಾಕ್ಸನ್ ಸಲ್ದಾನ,ಶೆಲ್ಡನ್ ಕ್ರಾಸ್ತಾ,ಡೆರಿಲ್ ಡಿ ಸೋಜ,ಪ್ರಮೀಳ ಶೆಟ್ಟಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಮಹಿಳಾ ಸಾಧಕರಾದ ಜ್ಯೋತಿ ಕೆ. ಉಳೆಪ್ಪಾಡಿ, ದೇವಿಕಾ ಪುರುಷೋತ್ತಮ್, ಪೂರ್ಣಿಮಾ ರೈ, ಪ್ರಮೀಳಾ ರಾವ್,ಜಯಶ್ರೀ ರಟ್ಟಿಹಳ್ಳಿ, ವಿಭಾ ಎಸ್. ನಾಯಕ್,ಡಾ| ರಶ್ಮಿ ಕೆ.ಸುಜಾತ (ಅಂಗನವಾಡಿ ಶಿಕ್ಷಕಿ, ಅಶೋಕ್‌ನಗರ) ಶ್ರದ್ಧಾ ಕೇಶವ ರಾಮಕುಂಜ,ಪೊಟ್ಟಮ್ಮ ಮಂಗ ಳೂರು,ಲಕ್ಷ್ಮೀ ಗಾಣಿಗ,ದೀಕ್ಷಿತಾ ಟಿ.ಎಸ್ ಇವರನ್ನು ಸನ್ಮಾನಿಸಲಾಯಿತು. ಪ್ರಮೀಳಾ ಹೆಗ್ಡೆ ಮತ್ತು ಗೀತಾ ಬಿ ರೈ ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular