ಅಹ್ಮದಾಬಾದ್: ಪಕ್ಷಕ್ಕೆ ಸಂಬಂಧಿಸಿದ ಕೆಲಸಗಳಿಗೆ ನೆರವಾಗದವರು ವಿಶ್ರಾಂತಿ ಪಡೆಯಲಿ. ಪಕ್ಷದ ಜವಾಬ್ದಾರಿ ನಿರ್ವಹಿಸದವರು ಪಕ್ಷದಿಂದ ನಿವೃತ್ತಿ ಪಡೆಯಬೇಕು ಎದು ಪಕ್ಷ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಅವರು, ಪಕ್ಷವನ್ನು ಸಂಘಟಿಸಲು ಜಿಲ್ಲಾಧ್ಯಕ್ಷರ ಪಾತ್ರ ಮಹತ್ವದ್ದಾಗಿದೆ. ಆದ್ದರಿಂದ ಎಐಸಿಸಿ ಮಾರ್ಗಸೂಚಿಯಂತೆ ಪಕ್ಷದ ಜಿಲ್ಲಾಧ್ಯಕ್ಷರನ್ನು ನಿಷ್ಪಕ್ಷಪಾತವಾಗಿ ಮತ್ತು ಕಟ್ಟುನಿಟ್ಟಾಗಿ ಆಯ್ಕೆ ಮಾಡಬೇಕಿದೆ ಎಂದರು.
ನೇಮಕವಾದ 1 ವರ್ಷದೊಳಗೆ ಆರ್ಹರನ್ನು ಸೇರಿಸಿಕೊಂಡು ಬೂತ್, ಮಂಡಲ, ಬ್ಲಾಕ್ ಹಾಗೂ ಜಿಲ್ಲಾ ಮಟ್ಟದ ಸಮಿತಿಗಳನ್ನು ಜಿಲ್ಲಾಧ್ಯಕ್ಷರು ರಚಿಸಬೇಕೆಂದು ಸೂಚಿಸಿದ್ದಾರೆ. ಭವಿಷ್ಯದಲ್ಲಿ ಚುನಾವಣ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಜಿಲ್ಲಾಧ್ಯಕ್ಷರು ಭಾಗಿಯಾಗಲಿದ್ದಾರೆ ಎಂದರು.