Saturday, December 13, 2025
Google search engine

Homeರಾಜ್ಯಸುದ್ದಿಜಾಲಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನ

ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಯೇನೆಪೋಯ ನರ್ಸಿಂಗ್ ಕಾಲೇಜು, ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು, ಜಿಲ್ಲಾ ವಕೀಲರ ಸಂಘ ದ.ಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ದ.ಕ \ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನ 2025 ಕಾರ್ಯಕ್ರಮದ ಪ್ರಯುಕ್ತ ದಿನಾಂಕ: 05-12-2025ರಂದು ಜಿಲ್ಲಾ ಕಾರ್ಯಕ್ರಮವನ್ನು ಇಂಡಿಯನ್‌ ರೆಡ್‌ಕ್ರಾಸ್ ಸೊಸೈಟಿ ಸಭಾಂಗಣ ಮಂಗಳೂರು ಇಲ್ಲಿ ಹಮ್ಮಿ ಕೊಂಡಿದ್ದು, ಸದರಿ ಕಾರ್ಯಕ್ರಮದ ಉದ್ಘಾಟನೆಯನ್ನು ಜೈಬುನ್ನಿಸಾ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ ಮಂಗಳೂರು ನೆರವೇರಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಹೆಚ್.ಐ.ವಿ ಎಂಬುದು ಒಂದು ಸೂಕ್ಷ್ಮ ರೋಗಾಣುವಾಗಿದ್ದು, ಒಮ್ಮೆ ವ್ಯಕ್ತಿ ಹೆಚ್.ಐ.ವಿ ಸೋಂಕಿಗೆ ಒಳಗಾದಲ್ಲಿ, ಸಮಾಜ ಆತನ್ನು ಸೋಂಕಿತನೆAದು, ಸಮಾಜದಲ್ಲಿ ತಾರತಮ್ಯವನ್ನು ಮಾಡುವುದರಿಂದ ಆತನು ಬದುಕುವ ಹಕ್ಕನ್ನು ಕಳೆದುಕೊಳ್ಳುವಂತಾಗಿದೆ. ಆದ್ದರಿಂದ ಹೆಚ್.ಐ.ವಿ ನಿಯಂತ್ರಣ ಮತ್ತು ತಡೆ ಕಾಯ್ದೆ 2017 ರ ಪ್ರಕಾರ ಸೋಂಕಿತರಾಗಿರುವ ವ್ಯಕ್ತಿಗಳ ಮಾನವೀಯ ಮತ್ತು ಸಂವಿಧಾನಿಕ ಹಕ್ಕುಗಳ ರಕ್ಷಣೆಯನ್ನು ಒದಗಿಸುತ್ತದೆ. ಯಾವುದೇ ವ್ಯಕ್ತಿಯ ಹೆಚ್.ಐ.ವಿ ಪರೀಕ್ಷೆ ವೈದ್ಯಕೀಯ ಚಿಕಿತ್ಸೆ ಅಥವಾ ಸಂಶೋಧನೆಯನ್ನು ಆತನ ಅನುಮತಿ ಇಲ್ಲದೆ ನಡೆಸುವಂತಿಲ್ಲ. ಹೆಚ್.ಐ.ವಿ ಸೋಂಕಿತರು/ ಭಾದಿತರ ಬಗ್ಗೆ ಯಾವುದೇ ತಾರತಾಮ್ಯ, ಕಳಂಕ ಬೇಡ, ಅವರಿಗೂ ಸಮಾಜದಲ್ಲಿ ಎಲ್ಲರೊಂದಿಗೆ ಬಾಳಿ ಬದುಕುವ ಅವಕಾಶವನ್ನು ನೀಡೋಣ ಎಂದರು.
ಮುಖ್ಯ ಅತಿಥಿಗಳಾದ ಡಾ.ಶಿವಪ್ರಕಾಶ್ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಇವರು ಮಾತನಾಡುತ್ತಾ, ಹದಿಹರೆಯದ ಯುವಜನತೆಯಲ್ಲಿ ಮನಸ್ಸಿನಲ್ಲಿ ಅನೇಕ ತಲ್ಲಣ, ಕಾತುರಗಳ ಗೊಂದಲದೊಂದಿಗೆ ಎಡವುದುಂಟು, ಈ ಸಮಯದಲ್ಲಿ ಸೂಕ್ತ ರೀತಿಯ ಮಾರ್ಗದರ್ಶನವು ಸದೃಢ ಆರೋಗ್ಯಕರ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಡಾ|| ಕಿಶೋರ್‌ಕುಮಾರ್ ಎಂ., ಪ್ರಾಂಶುಪಾಲರು, ಜಿಲ್ಲಾ ತರಬೇತಿ ಕೇಂದ್ರ ಸುರತ್ಕಲ್ ಇವರು ಮಾತನಾಡುತ್ತಾ, ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ ರಿಬ್ಬನ್ ಕ್ಲಬ್ ಗಳ ಮೂಲಕ ಹೆಚ್.ಐ.ವಿ ಏಡ್ಸ್ ಬಗ್ಗೆ ಹೆಚ್ಚಿನ ಜಾಗೃತಿಯನ್ನು ಮೂಡಿಸಬೇಕಾಗಿದೆ. ವಿದ್ಯಾರ್ಥಿ ಜೀವನದಲ್ಲಿ ರೂಢಿಸಿಕೊಳ್ಳುವ ಮೌಲ್ಯಜೀವನದುದ್ದಕ್ಕೂ ಸಹಕಾರಿಯಾಗುತ್ತದೆ. ಜೀವನದಲ್ಲಿ ನಿಗದಿತ ಗುರಿಯನ್ನು ತಲುಪಿ ಯಶಸ್ಸನ್ನು ಸಾಧಿಸಲು ಉನ್ನತ ಧ್ಯೇಯ ಮೌಲ್ಯ ಮತ್ತು ಶಿಸ್ತು ಅತೀ ಮುಖ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಸಿ.ಎ ಶಾಂತಾರಾಮ್ ಶೆಟ್ಟಿ ಸಭಾಪತಿಗಳು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮಾತನಾಡುತ್ತಾ, ಹೆಚ್.ಐ.ವಿ/ ಏಡ್ಸ್ ಹರಡದಂತೆತಡೆಗಟ್ಟಲು ಮುಂಜಾಗೃತೆ ವಹಿಸಬೇಕು. ಯುವಜನರು, ಮಹಿಳೆಯರು, ಮಕ್ಕಳು ಹಾಗೂ ಇತರರಿಗೆ ಜಾಗೃತಿ ಅರಿವು ಮೂಡಿಸಬೇಕು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಮಾಜ ಮುಖಿ ಕಾರ್ಯಕ್ರಮಗಳೊಂದಿಗೆ ರಕ್ತದಾನ ಶಿಬಿರದ ಮೂಲಕ ಸಂಗ್ರಹವಾದ ರಕ್ತವನ್ನು ಲೇಡಿಗೋಷನ್‌ ಆಸ್ಪತ್ರೆಯಲ್ಲಿ ನೀಡುವುದರಿಂದ ಹೆರಿಗೆಯಾಗುವ ಗರ್ಭಿಣಿ, ಬಾಣಂತಿಯರಿಗೆ ತುಂಬಾ ಪ್ರಯೋಜನವಾಗುತ್ತದೆ ಎಂದರು.
ಡಾ|| ಹೆಚ್.ಆರ್. ತಿಮ್ಮಯ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಇವರು ವಿಶ್ವ ಏಡ್ಸ್ ದಿನ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಹೆಚ್.ಐ.ವಿ/ ಏಡ್ಸ್ ಬಗ್ಗೆ ಜಾಗೃತಿಯನ್ನು ನೀಡಿದರು.
ಡಾ| ರೋಹನ್ ಮೋನಿಸ್, ಮುಖ್ಯ ಆಡಳಿತ ವೈದ್ಯಕೀಯ ಅಧಿಕಾರಿ, ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್, ಮಂಗಳೂರು ಇವರು ಈ ಮಹಾ ವೇದಿಕೆಯಲ್ಲಿ ಸನ್ಮಾನಕ್ಕಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಮುಖ್ಯಸ್ಥರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. 2025ರ ವಿಶ್ವ ಏಡ್ಸ್ ದಿನದ ಧ್ಯೇಯ ವಾಕ್ಯದೊಂದಿಗೆ ಕಣಚೂರು 2019ರಲ್ಲಿ ಸ್ಥಾಪಿಸಲಾದ KSAPS ಮತ್ತು NACO ಇದರ ಸಹಯೋಗದೊಂದಿಗೆ ದಕ್ಷಿಣ ಕನ್ನಡದಲ್ಲಿ ತನ್ನ ಮೊದಲ ಸಾರ್ವಜನಿಕ ಖಾಸಗಿ ಪಾಲುದಾರಿಕೆ ART ಕೇಂದ್ರವನ್ನು ಹೇಗೆ ಸ್ಥಾಪಿಸಿದೆ ಮತ್ತು ವ್ಯವಸ್ಥೆಗಳನ್ನು ಬಲಪಡಿಸುವ ಬಗ್ಗೆ 2025ರ ಥೀಮ್‌ನ ಬಗ್ಗೆ ಅವರು ಮಾತಾಡಿದರು ಮತ್ತು ಆ ಸಮಯದಲ್ಲಿ ಮುಖ್ಯಸ್ಥರಾಗಿದ್ದ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಮುಖ್ಯಸ್ಥರಿಗೆ ತಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸಿದರು.
ಡಾ|| ಖತೀಜಾ ದಿಲ್‌ಷದ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳನ್ನು ಸ್ವಾಗತಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ ಇವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ತಾರಾನಾಥ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ವಂದನಾರ್ಪಣೆಯನ್ನು ಮಾಡಿದರು.

RELATED ARTICLES
- Advertisment -
Google search engine

Most Popular