ಮುಂಬೈ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ತವರು ಮೈದಾನವಾದ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ಏಕದಿನ ವಿಶ್ವಕಪ್ ೨೦೨೩ ರ ನಾಕೌಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಿದ್ಧವಾಗಿದೆ. ಸತತ ಗೆಲುವಿನೊಂದಿಗೆ ಆಕ್ರಮಣಕಾರಿ ಆಟವಾಡುತ್ತಿರುವ ಭಾರತ ತಂಡ ಜೈತ್ರಯಾತ್ರೆಯನ್ನು ಇಲ್ಲಿಯೂ ಮುಂದುವರಿಸುವ ಆಶಯ ಹೊಂದಿದೆ. ಟಾಸ್ ಗೆದ್ದಿರುವ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇಲ್ಲಿ ಒಟ್ಟು ೨೭ ಏಕದಿನ ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ೧೪ ಬಾರಿ ಗೆದ್ದಿದೆ.
ನ್ಯೂಜಿಲೆಂಡ್ ತಂಡದ ಆಟಗಾರರು: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ಸಿ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ಡಬ್ಲ್ಯೂ), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಭಾರತ ತಂಡದ ಆಟಗಾರರು: ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.