Monday, September 22, 2025
Google search engine

Homeಸ್ಥಳೀಯಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಚಾಲನೆ: ಬಾನು ಮುಷ್ತಾಕ್ ಉದ್ಘಾಟನೆ, ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ

ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಚಾಲನೆ: ಬಾನು ಮುಷ್ತಾಕ್ ಉದ್ಘಾಟನೆ, ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ದಸರಾ ವನ್ನು ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸುವ ಮೂಲಕ ವಿದ್ಯುಕ್ತವಾದ ಚಾಲನೆ ನೀಡಿದರು. ಮೈಸೂರು ದಸರಾ ಉದ್ಘಾಟನೆಗೆ ಮುನ್ನ ಸಿಎಂ ಸಿದ್ದರಾಮಯ್ಯ ಈಡುಗಾಯಿ ಒಡೆದರು. ಬಳಿಕ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಸಚಿವ ವೆಂಕಟೇಶ್, ಶಾಸಕ ಜಿಟಿ ದೇವೇಗೌಡ, ಹರೀಶ್ ಗೌಡ ತನ್ವೀರ್ ಸೇಟ್ ಅನಿಲ್ ಚಿಕ್ಕಮಾದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸೇರಿದಂತೆ ಮೈಸೂರು ಜಿಲ್ಲೆಯ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದ್ದು, 1,000 ಆಸನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿ, ವಿಐಪಿ, ಮತ್ತು ಪಾಸ್ ಹೊಂದಿದವರಿಗೆ ಪ್ರತ್ಯೇಕ ಆಸನ ವ್ಯವಸ್ಥೆಯನ್ನು ಒದಗಿಸಲಾಗಿದೆ. ಬೆಟ್ಟದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಯದುವೀರ್ ಒಡೆಯರವರ ಖಾಸಗಿ ದರ್ಬಾರ್

ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾದರೆ, ಇತ್ತ ಅರಮನೆಯಲ್ಲಿ ಯದುವೀರ್ ಒಡೆಯರ್ 11ನೇ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಬೆಳಿಗ್ಗೆ ಸಿಂಹಾಸನಕ್ಕೆ ಸಿಂಹದ ಮುಖವನ್ನು ಜೋಡಣೆ ಮಾಡಲಾಗಿದೆ. ಚಾಮುಂಡಿ ತೊಟ್ಟಿಯ ವಾಣಿವಿಲಾಸ ದೇವರ ಮನೆಯಲ್ಲಿ ಯದುವೀರ್​ಗೆ ತ್ರಿಶಿಕಾ ಕುಮಾರಿ ಕಂಕಣ ಕಟ್ಟಲಿದ್ದಾರೆ. ಕೊಡಿ ಸೋಮೇಶ್ವರ ದೇವಸ್ಥಾನದ ಬಳಿ ಪಟ್ಟದ ಆನೆ, ಕುದುರೆ, ಹಸು ಸೇರಿ ಮಹಿಳೆಯರು ಕಳಶ ಹೊತ್ತು ಬರಲಿದ್ದಾರೆ. 12.42ರಿಂದ 12.58ರ ಒಳಗೆ ರತ್ನ ಖಚಿತ ಸಿಂಹಾಸನ ಅಲಂಕರಿಸಿ ಯದುವೀರ್ ದರ್ಬಾರ್ ನಡೆಸಲಿದ್ದಾರೆ.

RELATED ARTICLES
- Advertisment -
Google search engine

Most Popular