Monday, September 22, 2025
Google search engine

Homeಸ್ಥಳೀಯವಿಶ್ವವಿಖ್ಯಾತ ದಸರಾ : ಎಲ್ಲರ ಹಬ್ಬ, ಎಲ್ಲರ ಸಮಾನತೆಯ ಸಂಕೇತ: ಸಿಎಂ ಸಿದ್ದರಾಮಯ್ಯ

ವಿಶ್ವವಿಖ್ಯಾತ ದಸರಾ : ಎಲ್ಲರ ಹಬ್ಬ, ಎಲ್ಲರ ಸಮಾನತೆಯ ಸಂಕೇತ: ಸಿಎಂ ಸಿದ್ದರಾಮಯ್ಯ

ಮೈಸೂರು : ಸಂವಿಧಾನದಲ್ಲಿ ಎಲ್ಲರೂ ಮನುಷ್ಯರಾಗಿ ಬಾಳಿ ಸಮ ಸಮಾಜವನ್ನು ಕಟ್ಟಿ ಎಲ್ಲರೂ ಭಾತೃತ್ವದಿಂದ ಬಾಳುವ ಭಾವನೆ ಬೆಳೆಸಿಕೊಳ್ಳಿ ಎಂದು ಸಂದೇಶ ಸಾರುತ್ತದೆ. ಹಾಗಾಗಿ ಇದನ್ನು ನಾಡಹಬ್ಬ ಜನರ ಹಬ್ಬ ಎಂದು ಕರೆಯಲಾಗುತ್ತದೆ. ಇದು ಒಂದು ಧರ್ಮದ ಹಬ್ಬ, ಒಂದು ಜಾತಿಯ ಹಬ್ಬ ಅಲ್ಲ. ಎಲ್ಲ ಧರ್ಮದ ಎಲ್ಲಾ ಜಾತಿಗಳ ಹಬ್ಬ. ಹಾಗಾಗಿ ಇದನ್ನು ವಿಶ್ವವಿಖ್ಯಾತ ದಸರಾ ಅಂತ ಕರೆಯಲಾಗುತ್ತದೆ ಎಂದರು.

ಬಡವರಿಗೆ ಆರ್ಥಿಕವಾಗಿ ಶಕ್ತಿ ಕೊಡಬೇಕು ಜಾತಿ ವ್ಯವಸ್ಥೆಯನ್ನು ತೆಗೆದು ಹಾಕಬೇಕು. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿಯವರಿಗೆ ದೌರ್ಜನ್ಯ ಅಸಮಾನತೆ ಮುಂದುವರೆಯುತ್ತದೆ. ಅಸಮಾನತೆ,ದೌರ್ಜನ್ಯ ಹೋಗಬೇಕಾದರೆ ಎಲ್ಲರೂ ಮುಖ್ಯವಾಹಿನಿಗೆ ಬರಬೇಕಾದರೆ, ಸಮಾನತೆ ಬಂದಾಗ ಮಾತ್ರ ಸಮ ಸಮಾಜ ನಿರ್ಮಾಣ ಮಾಡಲಿಕ್ಕೆ ಸಾಧ್ಯವಾಗುತ್ತದೆ ಇಲ್ಲವಾದರೆ ಸಾಧ್ಯ ಆಗಲ್ಲ. ಇದನ್ನೇ ಬುದ್ಧ ಬಸವಣ್ಣ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರು ಹೇಳಿದ್ದು.

RELATED ARTICLES
- Advertisment -
Google search engine

Most Popular