Friday, April 4, 2025
Google search engine

Homeರಾಜ್ಯಸುದ್ದಿಜಾಲವಿಶ್ವ ಆಹಾರ ಸುರಕ್ಷತಾ ದಿನ: ಸಿಎಫ್ ಟಿಆರ್ ಐ ನಲ್ಲಿ  ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ

ವಿಶ್ವ ಆಹಾರ ಸುರಕ್ಷತಾ ದಿನ: ಸಿಎಫ್ ಟಿಆರ್ ಐ ನಲ್ಲಿ  ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ

ಮೈಸೂರು: ಇಂದು  ವಿಶ್ವ ಆಹಾರ ಸುರಕ್ಷತಾ ದಿನದ ಅಂಗವಾಗಿ  ಇಂದು ಮೈಸೂರಿನ ಸಿಎಫ್ ಟಿಆರ್ ಐ ನಲ್ಲಿ “ಆಹಾರ ಮಾನದಂಡಗಳು ಜೀವಗಳನ್ನು ಉಳಿಸುತ್ತವೆ” ಎಂಬ ವಿಷಯ ಆಧಾರಿತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿಶ್ವ ಆಹಾರ ಸುರಕ್ಷತಾ ದಿನದ ಪ್ರಯುಕ್ತ ವಿಶ್ವದಾದ್ಯಂತ ಒಂದು ದಿನದ ಕಾರ್ಯಕ್ರಮ ನಡೆಯುತ್ತಿದ್ದು, ನಗರದ ವಿವಿಧ ಶಾಲೆಗಳಿಂದ ವಿಧ್ಯಾರ್ಥಿಗಳು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಿಎಫ್ ಟಿಆರ್ ಐನ ವಿಜ್ಞಾನಿಗಳು ಹಾಗೂ ಮುಖ್ಯಸ್ಥರು ವಿಧ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಆಹಾರ ಸಂಸ್ಕರಣೆ, ಕಲಬೆರಕೆ ಹಾಗೂ ಬಳಕೆಯ ಬಗ್ಗೆ ಮಾಹಿತಿ ನೀಡಿದರು.

ವಿಶೇಷವಾಗಿ ಜೇನುತುಪ್ಪ ಕಲಬೆರಕೆ ತಡೆಗಟ್ಟಲು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು , ರೈತರು ತಮ್ಮ ಹೊಲಗಳಲ್ಲಿ ಬಳಸುತ್ತಿರುವ ಕಳಪೆ ಗುಣಮಟ್ಟದ ರಸಾಯನಿಕಗಳ ಬಗ್ಗೆಯೂ ಮಾಹಿತಿ ನೀಡಲಾಯಿತು.

RELATED ARTICLES
- Advertisment -
Google search engine

Most Popular