Thursday, April 17, 2025
Google search engine

Homeರಾಜ್ಯಸುದ್ದಿಜಾಲತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ

ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ

ವರದಿ: ಎಡತೊರೆ ಮಹೇಶ

ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆಯ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳಲಾಗಿತು. ಈ ಕಾರ್ಯ ಕ್ರಮದಲ್ಲಿ ತಾಲ್ಲೂಕಿನ ಆರೋಗ್ಯಾಧಿಕಾರಿಗಳಾದ ಡಾ” ಟಿ. ರವಿಕುಮಾರ್ ರವರು ಅಧ್ಯಕ್ಷತೆಯನ್ನು ವಹಿಸಿ ಜಾಥಾ ಕಾರ್ಯ ಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆಯಯ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ, ಮನುಷ್ಯ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಲು ಆರೋಗ್ಯ ಅತ್ಯಗತ್ಯ. ಅದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡನ್ನೂ ಒಳಗೊಂಡಿರುತ್ತದೆ. ಆರೋಗ್ಯ ಕಾಳಜಿ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆ ಪ್ರತಿವರ್ಷ ಏಪ್ರಿಲ್ 7ನ್ನು ವಿಶ್ವ ಆರೋಗ್ಯ ದಿನವೆಂದು ಆಚರಿಸುತ್ತದೆ.

ಈ ವರ್ಷ ಎಲ್ಲರಿಗೂ ಸಮಾನ ಆರೋಗ್ಯ ಎಂಬ ಘೋಷಣೆಯನ್ನು ನೀಡಿದೆ, ವಿಶ್ವ ಆರೋಗ್ಯ ಸಂಸ್ಥೆ ಆಹಾರದ ಮೂಲಕ ಆಗಮಿಸುವ ರೋಗಗಳ ಕಾಳಜಿಯನ್ನು ವಿಷಯವನ್ನಾಗಿ ಆರಿಸಿಕೊಂಡಿದೆ. “From farm to plate, make food safe.” (ಗದ್ದೆಯಿಂದ ತಟ್ಟೆಗೆ, ನಿಮ್ಮ ಆಹಾರ ಸುರಕ್ಷಿತವಾಗಿರಲಿ) ಎಂಬುದು ಲಾಭ ಮಾಡುವ ಗುರಿಯಿಂದ ಕೃತಕವಾಗಿ ಬೆಳೆಯನ್ನು ಪರಿವರ್ತಿಸುವ ರಾಸಾಯನಿಕ ಮತ್ತು ಇತರ ವಿಷಕಾರಿ ವಸ್ತುಗಳ ಬಗ್ಗೆ ಅರಿವು ಮೂಡಿಸುವುದು ಈ ಯೋಜನೆಯ ಪ್ರಮುಖ ಯೋಜನೆಯಾಗಿದೆ.

ವಿಶ್ವ ಆರೋಗ್ಯ ದಿನಾಚರಣೆಯನ್ನು ಸರ್ಕಾರ, ಸರ್ಕಾರೇತರ ಸಂಸ್ಥೆಗಳು, ವಿವಿಧ ಸಂಘಟನೆಗಳು ನಡೆಸಿಕೊಡುತ್ತವೆ.ಸಾರ್ವಜನಿಕರಿಗೆ ಆರೋಗ್ಯ ಮತ್ತು ವಿವಿಧ ಕೆಡುಕುಗಳ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ಇದರಲ್ಲಿ ಭಾಗವಹಿಸುವ ಸಂಸ್ಥೆಗಳು ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡಿ ಹೆಚ್ಚು ಹೆಚ್ಚು ಜನರಿಗೆ ಈ ಮಾಹಿತಿ ಲಭ್ಯವಾಗಲು ನೆರವಾಗುತ್ತವೆ.

ಜನರು ಸೂಕ್ತ ಕಾಲಕ್ಕೆ ತೆಗೆದುಕೊಳ್ಳಬೇಕಾದ ಔಷಧಿ, ಕಾಪಾಡಬೇಕಾದ ನೈರ್ಮಲ್ಯ, ಸ್ವಚ್ಛತಾ ಅಭ್ಯಾಸಗಳು, ನೀರಿನ ಸಂರಕ್ಷಣೆ, ಪರಿಸರದ ಸ್ವಚ್ಛತೆ, ಮೊದಲಾದ ವಿಷಯಗಳ ಬಗ್ಗೆ ಕಾಳಜಿವಹಿಸುವ ಮಾಹಿತಿಯನ್ನು ನೀಡುತ್ತಾರೆ. ಇದರಿಂದ ಸಮಾಜದ ಆರೋಗ್ಯ ಉತ್ತಮಗೊಳ್ಳುತ್ತದೆ. ಆರೋಗ್ಯಕರ ಸಮಾಜ ರೂಪುಗೊಳ್ಳುತ್ತದೆ. ಹಾಗೂ ಜನರು ಜೇಮ್ಸ್ ಫುಡ್ ಗಳನ್ನು ಹೆಚ್ಚಾಗಿ ತಿನ್ನಬಾರದು, ಇದರಿಂದ ಜನರಿಗೆ ಅನೇಕ ರೋಗಗಳು ಬರುತ್ತವೆ , ಆದುದರಿಂದ ಜೇಮ್ಸ್ ಫುಡ್ ಗಳನ್ನೂ ತಿನ್ನಬೇಡಿ ಎಂದು ತಿಳಿಸಿದರು.ಹಾಗೂ ತಾಯಿ ಮರಣ ಮತ್ತು ಶಿಶು ಮರಣವನ್ನು ಕಡಿಮೆ ಮಾಡಬೇಕು ಆಗ ಉತ್ತಮವಾದ ಸಮಾಜ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

ಈ ಕಾರ್ಯ ಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ ಕೀರ್ತಿ, ಡಾ ಚಂದ್ರ ಕಲಾ , DHEO ಪದ್ಮಾವತಿ, ಚಲ್ಲಲ್ , ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ನಾಗೇಂದ್ರ, ರವಿರಾಜ್ , ಅರಲಪ್ಪ , ಅಶೋಕ್ ,ನಾಗರಾಜು, ಉಮೇಶ್,ಪುಷ್ಪ, ಕೃಷ್ಣ, ಅರ್ಚನಾ, ರೇಖಾ, ಬಸಮ್ಮ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು ,ಸಮುದಾಯ ಆರೋಗ್ಯ ಅಧಿಕಾರಿಗಳು ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular