ಮಂಡ್ಯ: ಜಿಲ್ಲಾಡಳಿತದ ವತಿಯಿಂದ ವಿಶ್ವ ಮಾನವ ದಿನಾಚರಣೆ ಮತ್ತು ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡೋಣ ಎಂದು ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್ ನಾಗರಾಜ್ ರವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಮಾನವ ಮತ್ತು ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು ಮಾತನಾಡಿದರು. ವಿಶ್ವ ಮಾನವ ದಿನಾಚರಣೆಯನ್ನು ಡಿಸೆಂಬರ್ ೨೯ ರಂದು ಬೆಳಿಗ್ಗೆ ೧೦ ಗಂಟೆಗೆ ಅರ್.ಎ.ಪಿ.ಸಿ.ಎಂ.ಎಸ್ ಆವರಣದಲ್ಲಿರುವ ಕುವೆಂಪು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಉಪನ್ಯಾಸ ಹಾಗೂ ಗೀತಗಾಯನ ಕಾರ್ಯಕ್ರಮ ನಡೆಯಲಿದೆ ಎಂದರು.
ಜನವರಿ ೧ರಂದು ಬೆಳಿಗ್ಗೆ ೧೧ ಗಂಟೆಗೆ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯನ್ನು ಕಲಾ ಮಂದಿರದಲ್ಲಿ ನಡೆಯಲಿದೆ. ಉಪನ್ಯಾಸ ಕಾರ್ಯಕ್ರಮಕ್ಕೆ ಮುಖ್ಯ ವ್ಯಕ್ತಿಗಳನ್ನು ಆಹ್ವಾನಿಸುವಂತೆ ತಿಳಿಸಿದರು. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ಮಾಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉದಯ್ ಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ. ಸಿದ್ದಲಿಂಗೇಶ್, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ದೇವರಾಜ್, ವಿಶ್ವಕರ್ಮ ಸಮಾಜದ ಮುಖಂಡರುಗಳಾದ ತೈಲೂರು ಆನಂದಚಾರಿ, ರಘು ಆಚಾರ್, ಕೃಷ್ಣಕುಮಾರ್, ಪ್ರಸನ್ನ, ಸುದರ್ಶನ್, ರಮೇಶ್ , ಅಮಿತ್ ಹಾಗೂ ಮೋಹನ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.