ಯಳಂದೂರು: ವಿಶ್ವ ಶೌಚಾಲಯ ದಿನವಾದ ಇಂದು ಭಾನುವಾರ ಅಂಬಳೆ ಗ್ರಾಮ ಪಂಚಾಯಿತಿಯಲ್ಲಿ ಶೌಚಗೃಹದ ಜಾಗೃತಿ ಮೂಡಿಸಲಾಯಿತು. ಅಲ್ಲದೆ ೨೩ ಮಂದಿಗೆ ಶೌಚಗೃಹ ನಿರ್ಮಾಣಕ್ಕೆ ಮಂಜೂರಾತಿ ಆದೇಶ ಪತ್ರಗಳನ್ನೂ ಸಹ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಂಬಳೆ ಗ್ರಾಪಂ ಪಿಡಿಒ ಮಮತ ಮಾತನಾಡಿ, ಶೌಚಗೃಹ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರಿಗೆ ಬಯಲು ಶೌಚದಿಂದ ಆಗುವ ದುಷ್ಪರಿಣಾಮಗಳು, ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಅಲ್ಲದೆ ಪಂಚಾಯಿತಿಯನ್ನು ಬಯಲು ಶೌಚಮುಕ್ತ ಮಾಡುವ ನಿಟ್ಟಿನಲ್ಲಿ ನಾವು ಶ್ರಮ ಪಡುತ್ತಿದ್ದೇವೆ. ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ವರ್ಗಕ್ಕೆ ೨೦ ಸಾವಿರ ರೂ. ಹಾಗೂ ಸಾಮಾನ್ಯ ವರ್ಗಕ್ಕೆ ೧೨ ಸಾವಿರ ರೂ.ಗಳ ಸಹಾಯಧನವನ್ನು ಶೌಚಗೃಹ ನಿರ್ಮಾಣಕ್ಕೆ ನೀಡಲಾಗುತ್ತಿದೆ. ನಮ್ಮ ಪಂಚಾಯಿತಿಯಿಂದ ಭಾನುವಾರ ವಿಶ್ವ ಶೌಚದಿನದ ನಿಮಿತ್ತ ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ೨೩ ಮಂದಿಗೆ ಮಂಜೂರಾತಿ ಆದೇಶ ಪತ್ರಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.
ಕಾರ್ಯದರ್ಶಿ ಪುಟ್ಟರಾಜು, ನಂದಿನಿ, ಸೇರಿದಂತೆ ಅನೇಕರು ಇದ್ದರು.