ಲಂಡನ್ : ಓವಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಬುಧವಾರ ಆರಂಭವಾದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ಬಳಿಕ ಪ್ರತಿಕ್ರಿಯಿಸಿದ ನಾಯಕ ರೋಹಿತ್ ಶರ್ಮಾ, ನಾವು ಬೌಲ್ ಮಾಡುತ್ತೇವೆ. ಹವಾಮಾನವು ಮೋಡ ಕವಿದಿದೆ. ಪಿಚ್ ತುಂಬಾ ಬದಲಾಗುತ್ತದೆ ಎಂದು ನಾನು ಭಾವಿಸುವುದಿಲ್ಲ. ನಾಲ್ಕು ಸೀಮರ್‌ಗಳು ಮತ್ತು ಒಬ್ಬ ಸ್ಪಿನ್ನರ್ ಜಡೇಜಾ ಆಡಲಿದ್ದಾರೆ.. ಅಶ್ವಿನ್ ಅವರನ್ನು ಬಿಡುವುದು ಯಾವಾಗಲೂ ಕಠಿಣವಾಗಿದೆ. ಅವರು ಹಲವು ವರ್ಷಗಳ ಅವಧಿಯಲ್ಲಿ ನಮಗೆ ಮ್ಯಾಚ್ ವಿನ್ನರ್ ಆಗಿದ್ದಾರೆ. ಆದರೆ ತಂಡಕ್ಕೆ ಅಗತ್ಯವಿರುವ ಕೆಲಸಗಳನ್ನು ನಾವು ಮಾಡಬೇಕು ಮತ್ತು ಅಂತಿಮವಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.
ರಹಾನೆ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. 80 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಅವರು ತಂಡಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಸ್ವಲ್ಪ ಸಮಯದವರೆಗೆ ಹೊರಗಿದ್ದರಾದರೂ ಅವರ ಅನುಭವವು ನೆರವಾಗಲಿದೆ ಎಂದರು.
ತಂಡ ಇಂತಿದೆ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್, ನಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್