Sunday, April 13, 2025
Google search engine

Homeಅಪರಾಧಯಾದಗಿರಿ: ಬೊಲೆರೋ, ಬಸ್ ನಡುವೆ ಭೀಕರ ರಸ್ತೆ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಯಾದಗಿರಿ: ಬೊಲೆರೋ, ಬಸ್ ನಡುವೆ ಭೀಕರ ರಸ್ತೆ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಯಾದಗಿರಿ: ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ ಘಟನೆ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಯಾದಗಿರಿಯ ವರ್ಕನಹಳ್ಳಿ ಗ್ರಾಮದ ಬೊಲೆರೋ ಚಾಲಕ ಶರಣಪ್ಪ (30), ಸುನೀತಾ (19), ಸೋಮವ್ವ (50) ಮತ್ತು ತಂಗಮ್ಮ (55) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಬೊಲೆರೋ ವಾಹನದಲ್ಲಿ ಕುಟುಂಬಸ್ಥರು ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬೊಲೆರೋ ವಾಹನದಲ್ಲಿ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

RELATED ARTICLES
- Advertisment -
Google search engine

Most Popular