Thursday, September 25, 2025
Google search engine

Homeಅಪರಾಧಯಾದಗಿರಿ: ಪತ್ನಿ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಂದೆ

ಯಾದಗಿರಿ: ಪತ್ನಿ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಂದೆ

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಘಟನೆ ನಡೆದಿದೆ. 

ಯಾದಗಿರಿ ತಾಲೂಕಿನ ದುಬನ್ನೂರು ಕ್ಯಾಂಪ್ನಲ್ಲಿ ಈ ಒಂದು ಘಟನೆ ನಡೆದಿದೆ. ಮೂವರ ಮಕ್ಕಳ ಪೈಕಿ ಇಬ್ಬರನ್ನು ತಂದೆ ಶರಣಪ್ಪ ಕೊಂದಿದ್ದಾನೆ. ಭಾರ್ಗವ್ (5) ಹಾಗೂ ಸಾನ್ವಿ (2) ಕೊಲೆಯಾದ ಮಕ್ಕಳು ಎಂದು ತಿಳಿದುಬಂದಿದೆ.

ಇನ್ನು ಹಿರಿಯ ಮಗ ಹೇಮಂತ್ ಕೊಲೆಗೂ ಶರಣಪ್ಪ ಯತ್ನಿಸಿದ್ದ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಹಿರಿಯ ಮಗನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಶರಣಪ್ಪನ ಬಂಧನಕ್ಕೆ ಪೊಲೀಸರು ಬಲೇ ಬೀಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟ ಪತಿ ತನ್ನ ಪುಟ್ಟ ಮಕ್ಕಳನ್ನು ಕೊಂದು ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಯಾದಗಿರಿ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular