ಶಿವಮೊಗ್ಗ: ಈ ದಿನ ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಶ್ರೀಮತಿ ಅಪರ್ಣ ಕೊಳ್ಳ, ಮಾನ್ಯ ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ರವರು, ಶ್ರೀನಿವಾಸ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಶಿವಮೊಗ್ಗ, ಮಂಜುನಾಥ್, ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಮೊಗ್ಗ. ಗಜೇಂದ್ರ ಮೂರ್ತಿ, ಪ್ರಾಂಶುಪಾಲರು, ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಶಿವಮೊಗ್ಗ ಇವರುಗಳು ಹಾಜರಿದ್ದು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವನ್ನು ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ದೈಹಿಕ ಶಿಕ್ಷಕ ಪ್ರಕಾಶ್ ನಡೆಸಿಕೊಟ್ಟರು.