ರಾಮನಗರ: ಮನುಷ್ಯರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಯೋಗ ಮದ್ದು ಎಂದು ವೈಜ್ಞಾನಿಕವಾಗಿ ಪ್ರಪಂಚಕ್ಕೆ ಸಾರಿದ ದೇಶ ಭಾರತ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 9ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಿAದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್ 21 ರಂದು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತದೆ. ಮಕ್ಕಳಿಂದಲೇ ಯೋಗಾಭ್ಯಾಸ ಮಾಡಿದರೆ ಯಾವುದೇ ರೀತಿಯ ಕಾಯಿಲೆಗಳು ಬರುವುದಿಲ್ಲ. ಮಾನಸಿಕವಾಗಿ ಸದೃಢರಾಗುತ್ತೀರಿ ಹಾಗೂ ದೈಹಿಕ ಸೌಂದರ್ಯ ಹೆಚ್ಚಾಗುತ್ತದೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಯೋಗವು ಹಲವಾರು ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಮಾನಸಿಕೆ ಒತ್ತಡಗಳನ್ನು ನಿವಾರಿಸಲು ಯೋಗವು ಮುಖ್ಯವಾಗಿದೆ ಎಂದರು.
ಜಾಥಾ ಕಾರ್ಯಕ್ರಮದಲ್ಲಿ ಆಯುಷ್ ಅಧಿಕಾರಿ ರಾಜಲಕ್ಷಿö್ಮÃ, ವಸತಿಯುಕ್ತ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಎನ್‌ಸಿಸಿ ಅಧಿಕಾರಿ ಕ್ಯಾಪ್ಟನ್ ಡಾ. ಲಕ್ಷಿö್ಮÃ ಟಿ., ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.