ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಯುವ ಪೀಳಿಗೆ ತಂಬಾಕು ಅಗಿಯುವುದು ಬೇಡ, ಹೊಗೆ ಬೀಡೋದು ಬೇಡ ಇಂದೇ ತಂಬಾಕು ತ್ಯಜಿಸಿ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು ಹೇಳಿದರು.
ಕೆ.ಆರ್.ನಗರ ಪಟ್ಟಣದ ಬ್ರೈಟ್ ಪಿಯು ಕಾಲೇಜಿನಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ನೆರದಿದ್ದ ವಿದ್ಯಾರ್ಥಿ ಸಮೂಹಕ್ಕೆ ಸಂದೇಶದ ಮೂಲಕ ತಿಳಿಸಿದರು.
ವಿಶ್ವ ತಂಬಾಕು ರಹಿತ ದಿನವನ್ನು, ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ತಂಬಾಕು ಸೇವೆನೆಯನ್ನು ಕಡಿಮೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆಯ ನೇತೃತವದಲ್ಲಿ ಈ ದಿನವನ್ನು ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತಿದೆ.
ಧೂಮಪಾನ ಮತ್ತು ಹೊಗೆ ರಹಿತ ತಂಬಾಕು ಉತ್ಪನ್ನಗಳು ಸೇರಿದಂತೆ ತಂಬಾಕು ಸೇವೆನೆಯಿಂದ ಉಂಟಾಗುವ ಆರೋಗ್ಯದ ಅಪಾಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಶಿಕ್ಷಣ ನೀಡುವುದು ವಿಶ್ವ ತಂಬಾಕು ವಿರೋಧಿ ದಿನದ ಉದ್ದೇಶವಾಗಿದೆ. ತಂಬಾಕು ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ, ಸಂಸ್ಥೆಗಳು ಆದೇಶ ನೀಡಿದೆ ಎಂದರು.
ತಂಬಾಕು ಮತ್ತು ಅದರ ಉತ್ಪನ್ನದ ಸೇವನೆಯಿಂದ ಉಂಟಾಗುವ ಅಪಾಯ ಮತ್ತು ಕುಟುಂಬ, ಸಮಾಜ ಮತ್ತು ಪರಿಸರದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಪಟ್ಟಣ ಸೇರಿದಂತೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಆವಳಿ ಮೂಡಿಸಲಾಗುತ್ತಿದೆ ಎಂದರಲ್ಲದೇ ಬಾರ್, ಕಿರಾಣಿ ಅಂಗಡಿಗಳಲ್ಲಿ ತಂಬಾಕು ವಸ್ತು ಹಾಗೂ ಗುಟ್ಕಾ ಮಾರಾಟಕ್ಕೆ ಕಡಿವಾಣ ಹಾಕಲು ಕ್ರಮ ವಹಿಸಲಾಗಿದೆ ಎಂದರು.
ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಪ್ರಧಾನ ಸಿವಿಲ್ ನ್ಯಾಯದೀಶರಾದ ಚಂದನ್. ಎಸ್. ಉದ್ಘಾಟಿಸಿದರು. ಹಿರಿಯ ನ್ಯಾಯಾಧೀಶರಾದ ಕುಮಾರಿ ಆಶ್ರೀನಾ ಮಕ್ಕಳ ಜವಬ್ದಾರಿ ಬಗ್ಗೆ ಮಾತನಾಡಿದರು.
ಬ್ರೈಟ್ ಪಿಯು ಕಾಲೇಜಿನ ಅಧ್ಯಕ್ಷ ಕೆ. ಅನುರಾದ, ಪ್ರಾಂಶುಪಾಲ ಸಂತೋಷ್ ಕುಮಾರ್, ಆಡಳಿತಾಧಿಕಾರಿ ಮೇನಕ ತಾ.ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್, ಹಾಗೂ ಕಾಲೇಜಿನ ಎಲ್ಲ ಉಪನ್ಯಾಸಕರು ಇದ್ದರು.