ಬೆಂಗಳೂರು : ಯುವಕನೊಬ್ಬ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾ ನಗರದ ಸರ್ವಿಸ್ ಅಪಾರ್ಟ್ ಮೆಂಟ್ನಲ್ಲಿ ನಡೆದಿದೆ.
ಅಸ್ಸಾಂ ಮೂಲದ ಮಾಯಾ ಗೊಗೋಯಿ ಕೊಲೆಯಾದ ಯುವತಿಯಾಗಿದ್ದು, ಆರವ್ ಹಾರ್ನಿ ಎಂಬ ಯುವಕ ಮಾಯಾಳನ್ನು ಕೊಂದು, ಶವದ ಜತೆ ಒಂದು ದಿನ ಕಳೆದು ಮಾರನೇ ದಿನ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.