ಹನೂರು: ಯುವಕನೊಬ್ಬ ಕಾರ್ಯನಿಮಿತ್ತ ತಾಲ್ಲೂಕಿನ ಹಿರಿಯಂಬಲ ಗ್ರಾಮಕ್ಕೆ ತೆರಳಿ ಕತ್ತೆಕಾಲ್ ಪೋಡು ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ಕಾಡಾನೆ ದಾಳಿಗೆ ಬಲಿಯಾಗಿ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಕತ್ತೆಕಾಲ್ ಪೋಡು ಗ್ರಾಮದ ಜಡೆಯ ಎಂಬುವರ ಪುತ್ರ ಮಾದ(೨೩) ಆನೆ ದಾಳಿಗೆ ಬಿಯಾದ ಯುವಕ. ಯುವಕ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ವಿಚಾರವನ್ನು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಕೂಡಲೇ ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಹಾಗೂ ಪೊಲೀಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶವವನ್ನು ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದರು.
ಮಾಜಿ ಶಾಸಕ ಆರ್. ನರೇಂದ್ರ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ, ಘಟನೆ ಕುರಿತು ಮಾಹಿತಿ ಪಡೆದುಕೊಂಡರು.