Monday, January 19, 2026
Google search engine

Homeಅಪರಾಧವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: ಯುವಕನ ಬಂಧನ

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: ಯುವಕನ ಬಂಧನ

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನನ್ನು ಮಂಗಳೂರಿನ ಕದ್ರಿ ಮಂಗಳೂರು ಪೂರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪದವು ಗ್ರಾಮದ ಕೈಲಾಸ ಕಾಲನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಬಳಿ ಯುವಕನೋರ್ವ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular