ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು.