ಕೊಪ್ಪಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇರಕಲ್ಲಗಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಇರಕಲ್ಲಗಡದ ಶಿಕ್ಷಣ ಪ್ರೇಮಿ ವೀರಬಸಪ್ಪ ಪಟ್ಟಣಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಇರಕಲ್ಲಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಉಮೇಶ್ ಅಧ್ಯಕ್ಷತೆ ವಹಿಸಿದ್ದರು.
ಕೊಪ್ಪಳ ಜಿಲ್ಲೆಯ ವಿವಿಧ ಕಲಾ ಪ್ರಕಾರಗಳ ಕಲಾವಿದರು ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿದರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳನ್ನು ರಂಜಿಸಿದರು ಮತ್ತು ಮುದ್ರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಕಲಾವಿದರಿಗೆ ಪ್ರಮಾಣ ಪತ್ರ ವಿತರಿಸಿದರು. ಪತ್ರಕರ್ತರಾದ ಮಂಜುನಾಥ ಗೊಂಡಬಾಳ ಮತ್ತು ರಾಮಮೂರ್ತಿ ನವಲಿ, ಮಹಿಳಾ ಹೋರಾಟಗಾರ್ತಿ ಜ್ಯೋತಿ ಎಂ.ಗೊಂಡಬಾಳ, ಕಾಲೇಜು ಐ.ಕ್ಯೂ.ಎ.ಸಿ ಸಂಚಾಲಕ ಪ್ರಕಾಶಗೌಡ ಎಸ್.ಯು. ಉಪನ್ಯಾಸಕ ಶಂಕ್ರಯ್ಯ ಅಬ್ಬಿಗೇರಿ ಸೇರಿದಂತೆ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವೆಂಕಟೇಶ ಹೊಸಮನಿ ಕಾರ್ಯಕ್ರಮ ನಿರೂಪಿಸಿದರು.