ಮೈಸೂರು : ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ ೨೦೨೨-೨೩ ಮತ್ತು ೨೦೨೩-೨೪ ನೇ ಸಾಲಿನಲ್ಲಿ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲಮೊ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhugs.Karnataka.gov.inನಲ್ಲಿ ನೊಂದಾಯಿಸಿಕೊಳ್ಳಲು ಜನವರಿ ೬ ರಿಂದ ೨೦ ರ ವರೆಗೆ ವಿಷೇಶ ನೊಂದಣಿ ಅಭಿಯಾನವನ್ನು ಮೈಸೂರು ವಿಶ್ವವಿದ್ಯಾನಿಲಯ ಮೈಸೂರು ಇಲ್ಲಿ ಹಮ್ಮಿಕೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.
ಪದವಿದರರಿಗೆ ಪ್ರತಿ ತಿಂಗಳು ರೂ.೩೦೦೦ ಹಾಗೂ ಡಿಪ್ಲೋಮಾ ಪದವಿದರರಿಗೆ ರೂ.೧೫೦೦ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ ೧೮೦ ದಿವಸಗಳು ಪೂರೈಸಿ ಹೆಸರನ್ನು ನೋಂದಾಯಿಸಿಕೊoಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ ನಂತರ ಪ್ರತಿ ತಿಂಗಳು ಯುವ ನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಮಾಹೆಯಾನ ತಾನು ನಿರುದ್ಯೋಗಿ ಎಂದು ಉನ್ನತ ವ್ಯಾಸಂಗ ಮುಂದುವರಿಸುತ್ತಿಲ್ಲವೆoದು ಹಾಗೂ ಸ್ವಯಂ ಉದ್ಯೋಗಿ ಅಲ್ಲವೆಂದು ಪ್ರತಿ ತಿಂಗಳ ೨೫ನೇ ತಾರೀಕಿನೊಳಗಾಗಿ ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಸ್ವಯಂ ಘೋಷಣೆ ಆಧಾರದ ಮೇಲೆ ಅಭ್ಯರ್ಥಿಗಳು ಮುಂದಿನ ಪಾವತಿಯನ್ನು ಸ್ವೀಕರಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮವನ್ನು ಮತ್ತು ಬಾಪೂಜಿ ಕೇಂದ್ರಗಳಲ್ಲಿ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಸೀಡಿಂಗ್ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ ಮೊಬೈಲ್ ನಂಬರನ್ನು ಹೊಂದಿರತಕ್ಕದ್ದು ಅರ್ಜಿ ಸಲ್ಲಿಸಿದ ನಂತರ ಸೇವಾ ಸಿಂಧು ಪೋರ್ಟಲ್ ನಲ್ಲಿ ತಮ್ಮ ಅರ್ಜಿಯು ಯಾವ ಅಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು ಒಂದು ವೇಳೆ ಅರ್ಜಿಯು ಅಪ್ರೂವ್ ಆಗದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ಅಪ್ರೂವ್ ಮಾಡಿಕೊಳ್ಳಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂ.ಸಂ:೯೧೧೩೯೮೨೫೧೩, ೮೭೪೮೯೮೪೩೬೦,೯೯೮೬೨೬೩೬೯೫ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.